ಬೆಂಗಳೂರು : ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿತ್ತು. ಇದೀಗ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮೊದಲ ಚಾರ್ಜ್ ಶೀಟ್ನ್ನು ಸಲ್ಲಿಸಿದ್ದಾರೆ.
ಎಸ್‌ಐಟಿ ಅಧಿಕಾರಿಗಳು 123 ಸಾಕ್ಷಿಗಳನ್ನು ಕಲೆಹಾಕಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದಾರೆ. ಸುಮಾರು 2000 ಪುಟಗಳಷ್ಟು ದೋಷಾರೋಪಣೆ ಪಟ್ಟಿಯನ್ನು ಎಸ್‌ಐಟಿ ಅಧಿಕಾರಿಗಳು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ.
ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಅಪ್ಪ, ಮಗನ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ಅಪ್ಪ ಹೆಚ್.ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ಹಾಗೂ ಮಗ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾದ ಮೊದಲ ಪ್ರಕರಣ ಇದಾಗಿದೆ. ಇದೀಗ SIT ಅಧಿಕಾರಿಗಳು ತನಿಖೆ ಪೂರ್ಣಗೊಳಿಸಿ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಪ್ರಕರಣದ ತನಿಖಾಧಿಕಾರಿ ಸುಮರಾಣಿ ಅವರಿಂದ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.
ಇದನ್ನೂ ಓದಿ : ಕಾಟನ್ ಪೇಟೆಯಲ್ಲಿ ಶರತ್ ಕೊಲೆ ಕೇಸ್ – ನಾಲ್ವರು ಆರೋಪಿಗಳು ಅರೆಸ್ಟ್..!