Download Our App

Follow us

Home » ರಾಜಕೀಯ » ದ್ರಾಕ್ಷಿ ಬೆಳೆಗಾರರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದ ಸಂಸದ ಡಾ.ಕೆ.ಸುಧಾಕರ್‌..!

ದ್ರಾಕ್ಷಿ ಬೆಳೆಗಾರರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದ ಸಂಸದ ಡಾ.ಕೆ.ಸುಧಾಕರ್‌..!

ಬೆಂಗಳೂರು : ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ದ್ರಾಕ್ಷಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಂಸದ ಡಾ.ಕೆ.ಸುಧಾಕರ್‌ ಸರ್ಕಾರದ ಗಮನ ಸೆಳೆದರು. ಈ ಬಗ್ಗೆ ಚುಕ್ಕೆ ಗುರುತಿಲ್ಲದ ಪ್ರಶ್ನೆಗಳಡಿ, ದ್ರಾಕ್ಷಿ ಬೆಳೆಗಾರರು ಇತ್ತೀಚಿನ ವರ್ಷಗಳಲ್ಲಿ ವಿವಿಧ ಕಾರಣಗಳಿಂದ ಅಪಾರ ನಷ್ಟ ಅನುಭವಿಸಿದ್ದಾರೆ. ಈ ಬೆಳೆಗಾರರಿಗೆ ಪ್ರೋತ್ಸಾಹ ನೀಡಲು ಸರ್ಕಾರ ಯಾವೆಲ್ಲ ಕ್ರಮಗಳನ್ನು ಕೈಗೊಂಡಿದೆ ಎಂದು ಡಾ.ಕೆ.ಸುಧಾಕರ್‌ ಅವರು ಪ್ರಶ್ನೆ ಪ್ರಶ್ನೆ ಕೇಳಿದ್ದಾರೆ. ಈ ಕುರಿತು ಕೇಂದ್ರ ಸರ್ಕಾರ ಲಿಖಿತ ಉತ್ತರ ನೀಡಿದೆ.

ಈ ಬಗ್ಗೆ ಉತ್ತರ ನೀಡಿರುವ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ, ಸಾಮಾನ್ಯ ವರ್ಗದ ಬೆಳೆಗಾರರಿಗೆ ಹೆಕ್ಟೇರ್‌ಗೆ ಗರಿಷ್ಠ 24,000 ರೂ. ಹಾಗೂ ಎಸ್‌ಸಿ/ಎಸ್‌ಟಿ ಗೆ ಹೆಕ್ಟೇರ್‌ಗೆ ಗರಿಷ್ಠ 30,000 ರೂ. ಗೊಬ್ಬರ ಸಹಾಯಧನ ನೀಡಲಾಗುತ್ತಿದೆ. ಜೊತೆಗೆ ಪೌಷ್ಠಿಕಾಂಶ ಹಾಗೂ ರೋಗ ನಿಯಂತ್ರಣಕ್ಕಾಗಿ ಹೆಕ್ಟೇರ್‌ಗೆ ಗರಿಷ್ಠ 2,000 ರೂ. ನೀಡಲಾಗುತ್ತಿದೆ. ಕೀಟನಾಶಕ ಮತ್ತು ಗೊಬ್ಬರ ಸಿಂಪಡಣೆಗಾಗಿ ಯಂತ್ರ ಖರೀದಿಗೆ ಸಾಮಾನ್ಯ ವರ್ಗಕ್ಕೆ ಗರಿಷ್ಠ 76,000 ರೂ. ಹಾಗೂ ಎಸ್‌ಸಿ/ಎಸ್‌ಟಿ ಗೆ ಗರಿಷ್ಠ 95,000 ರೂ. ಸಹಾಯಧನ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದೆ.

2021-22 ಹಾಗೂ 2022-23 ನೇ ಸಾಲಿನಲ್ಲಿ ಅತಿಯಾದ ಮಳೆ ಹಾಗೂ ರೋಗಗಳಿಂದಾಗಿ ದ್ರಾಕ್ಷಿ ಬೆಳೆ ಪ್ರದೇಶ ಹಾಗೂ ಉತ್ಪಾದನೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. 2022-23 ರಲ್ಲಿ ಚಿಕ್ಕಬಳ್ಳಾಪುರದಲ್ಲಿ 568 ಹೆಕ್ಟೇರ್‌ನಲ್ಲಿ ದ್ರಾಕ್ಷಿ ಬೆಳೆದಿದ್ದು, 13,113 ಟನ್‌ ಉತ್ಪಾದನೆಯಾಗಿದೆ. ಇದೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರದಲ್ಲಿ 1,712 ಹೆಕ್ಟೇರ್‌ನಲ್ಲಿ ದ್ರಾಕ್ಷಿ ಬೆಳೆದಿದ್ದು, 43,086 ಟನ್‌ ದ್ರಾಕ್ಷಿ ಉತ್ಪಾದನೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಬೆಳೆಗಾರರು ನಷ್ಟ ಪರಿಹಾರ ಪಡೆಯಲು, ಹವಾಮಾನ ಆಧಾರಿತ ಬೆಳೆ ಬಿಮೆ ಯೋಜನೆಗೆ (RWBCIS) ಹೆಸರು ನೋಂದಾಯಿಸಲು ಸಲಹೆ ನೀಡಲಾಗುತ್ತಿದೆ. ಈ ಯೋಜನೆಯಡಿ, ಶೇ.5 ರಷ್ಟು ಅಂದರೆ ಹೆಕ್ಟೇರ್‌ಗೆ 14,000 ರೂ. ವಿಮೆ ಪಾವತಿಸಬೇಕು. ನಷ್ಟವಾದಾಗ ಹೆಕ್ಟೇರ್‌ಗೆ 2.80 ಲಕ್ಷ ರೂ. ಪರಿಹಾರ ಸಿಗಲಿದೆ ಎಂದು ಸಚಿವಾಲಯ ತಿಳಿಸಿದೆ.

ಇಷ್ಟೇ ಅಲ್ಲದೇ, ಚಿಕ್ಕಬಳ್ಳಾಪುರ ಹಾಗು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ದ್ರಾಕ್ಷಿ ಕೃಷಿಯನ್ನು ಪ್ರೋತ್ಸಾಹಿಸಲು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಬೆಳೆಗಾರರಿಗೆ ಹನಿ ನೀರಾವರಿಗಾಗಿ ಸಾಮಾನ್ಯ ವರ್ಗಕ್ಕೆ ಶೇ.75 ಹಾಗೂ ಎಸ್‌ಸಿ/ಎಸ್‌ಟಿ ವರ್ಗಕ್ಕೆ ಶೇ.90 ಸಹಾಯಧನ ನೀಡಲಾಗುತ್ತಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಇದನ್ನೂ ಓದಿ : ಮಹಿಳೆಯರಿಗೆ ಗುಡ್​ ನ್ಯೂಸ್ – ಇಂದಿನಿಂದಲೇ ಅಕೌಂಟ್​ಗೆ ಬರಲಿದೆ ಗೃಹಲಕ್ಷ್ಮಿ ಹಣ..!

Leave a Comment

DG Ad

RELATED LATEST NEWS

Top Headlines

ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದಲ್ಲಿ ಡ್ರೆಸ್ ಕೋಡ್ ಜಾರಿ – ದೇವರ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ..!

ಚಿಕ್ಕಮಗಳೂರು : ಇತ್ತೀಚೆಗೆ ಶೃಂಗೇರಿಯ ಶ್ರೀ ಶಾರದಾಂಬೆ ಸನ್ನಿಧಾನದಲ್ಲಿ ಹಾಗೂ ಸುತ್ತಲಿನ ದೇವಸ್ಥಾನಗಳಲ್ಲಿ ಡ್ರೆಸ್ ಕೋಡ್ ಜಾರಿಯಾಗಿತ್ತು. ಇದೀಗ ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳವಾದ ಹೊರನಾಡು ಶ್ರೀ

Live Cricket

Add Your Heading Text Here