ಬೆಂಗಳೂರು : ಉತ್ತರ ಭಾರತೀಯರು ಬೆಂಗಳೂರು ತೊರೆದರೆ ಬೆಂಗಳೂರು ಖಾಲಿಯಾಗುತ್ತದೆ ಎಂದು ಇನ್‌ಸ್ಟಾಗ್ರಾಂನಲ್ಲಿ ರೀಲ್ಸ್ ಮೂಲಕ ಅಲ್ಪಬುದ್ಧಿ ಮತ್ತು ದುರಹಂಕಾರ ಪ್ರದರ್ಶಿಸಿದ ಉತ್ತರ ಭಾರತ ಮೂಲದ ಸುಗಂಧಾ ಶರ್ಮಾ ತನ್ನ ಕೆಲಸವನ್ನೇ ಕಳೆದುಕೊಂಡಿದ್ದಾಳೆ.
ಸುಗಂಧ್ ಶರ್ಮ ಸೋಶಿಯಲ್ ಮೀಡಿಯಾದಲ್ಲಿ ರಾಜ್ಯದ ಕುರಿತಾಗಿ ಕೆಟ್ಟದಾಗಿ ಮಾತನಾಡಿದ ಬೆನ್ನಲ್ಲಿಯೇ ಆಕೆಯ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ನೀವು ಬೆಂಗಳೂರು ಬಿಟ್ಟು ತೊಲಗಿ ಎಂದು ಸಾಕಷ್ಟು ಮಂದಿ ಹೇಳಿದ್ದರು. ಕರ್ನಾಟಕದ ಬಗ್ಗೆ ಮಾತನಾಡಿದ್ದ ಸುಗಂಧ ಶರ್ಮ ವಿರುದ್ದ ದೊಡ್ಡ ಮಟ್ಟದ ಆಕ್ರೋಶ ವ್ಯಕ್ತವಾಗಿತ್ತು. ಈ ನಿಟ್ಟಿನಲ್ಲಿ ಯುವತಿಗೆ ಬುದ್ದಿ ಕಲಿಸಲು ಕನ್ನಡ ಪರ ಸಂಘಟನೆಗಳು ಮುಂದಾಗಿದ್ದವು.
ಇನ್ನು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಆಕೆ ಕೆಲಸ ಮಾಡುತ್ತಿದ್ದ ಕಂಪನಿ ಕೂಡ ಎಚ್ಚೆತ್ತುಕೊಂಡಿದೆ. ವಿಡಿಯೋ ವೈರಲ್ ಆಗ್ತಿದ್ದಂತೆ ಸುಗಂಧ ಶರ್ಮರನ್ನ ಕಂಪನಿ ಕೆಲಸದಿಂದ ತೆಗೆದುಹಾಕಿದೆ. ಫ್ರೀಡಂ ಕಂಪನಿಯಲ್ಲಿ ಸುಗಂಧ ಶರ್ಮ ಕೆಲಸ ಮಾಡುತ್ತಿದ್ದರು. ಸದ್ಯ ಮಹಿಳೆಯನ್ನ ಫ್ರೀಡಂ ಕಂಪನಿ ಟರ್ಮಿನೇಟ್ ಮಾಡಿದೆ. ಫ್ರೀಡಂ ಕಂಪನಿಗೆ ತೆರಳಿ ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಇದರ ಮಾಹಿತಿ ಪಡೆದುಕೊಂಡಿದ್ದಾರೆ. ಬೆಂಗಳೂರಿನಲ್ಲಿ ಆಕೆ ಬೇರೆ ಯಾವುದೇ ಕಂಪನಿಯಲ್ಲಿ ಕೆಲಸ ನಿರ್ವಹಿಸಿದರೂ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ತಾನು ಮಾಡಿದ ರೀಲ್ಸ್‌ನಲ್ಲಿ ಧಿಮಾಕು ತೋರಿಸಿದ್ದ ಉತ್ತರ ಭಾರತ ಮೂಲದ ಸುಗಂಧ್ ಶರ್ಮಗೆ ಕನ್ನಡಿಗರು ಚಳಿ ಬಿಡಿಸಿದ ಬಳಿಕ ಮೆತ್ತಗಾಗಿದ್ದಳು. ‘ನನಗೆ ಕನ್ನಡ ಅಂದ್ರೆ ತುಂಬಾ ಇಷ್ಟ, ಕನ್ನಡ ಕಲಿಯಲು ಪ್ರಯತ್ನ ಮಾಡ್ತಿದ್ದೇನೆ ಎಂದು ತೇಪೆ ಹಚ್ಚುವ ಪ್ರಯತ್ನ ಮಾಡಿ ರೀಲ್ಸ್ ಪೋಸ್ಟ್ ಮಾಡಿದ್ದರು.
ಇದನ್ನೂ ಓದಿ : ಭಕ್ತರಿಗೆ ಮತ್ತೊಂದು ಶಾಕ್.. ತಿಮ್ಮಪ್ಪನ ಪವಿತ್ರ ಪ್ರಸಾದ ಲಡ್ಡುವಿನಲ್ಲಿ ಗುಟ್ಕಾ ಪ್ಯಾಕೆಟ್ ಪತ್ತೆ..!