ಬೆಂಗಳೂರು : ಬೆಂಗಳೂರಿನಲ್ಲಿ PG ಕಟ್ಟಡದ ಮೇಲಿಂದ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬಿಲ್ಡಿಂಗ್ ಮೇಲಿಂದ ಕೆಳಗೆ ಬೀಳುತ್ತಿರುವ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ತಮಿಳುನಾಡು ಮೂಲದ ವಿಷ್ಣು (28) ಆತ್ಮಹತ್ಯೆ ಮಾಡಿಕೊಂಡ ಯುವಕ. ಕುಡಿದ ಮತ್ತಿನಲ್ಲಿ ಕಟ್ಟಡದಿಂದ ಹಾರಿರುವ ಶಂಕೆ ವ್ಯಕ್ತವಾಗಿದ್ದು, ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಈ ಪ್ರಕರಣ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಇದನ್ನೂ ಓದಿ : ಹಾವೇರಿ : ಚರಂಡಿಯಲ್ಲಿ ಕೊಚ್ಚಿ ಹೋಗಿ 12ವರ್ಷದ ಬಾಲಕ ಸಾವು..!
Post Views: 260