Download Our App

Follow us

Home » ಸಿನಿಮಾ » ತಮಿಳು ಸೂಪರ್ ಸ್ಟಾರ್ ತಳಪತಿ ವಿಜಯ್ ರಾಜಕೀಯಕ್ಕೆ ಎಂಟ್ರಿ – ನೂತನ ಪಕ್ಷ ಘೋಷಣೆ..!

ತಮಿಳು ಸೂಪರ್ ಸ್ಟಾರ್ ತಳಪತಿ ವಿಜಯ್ ರಾಜಕೀಯಕ್ಕೆ ಎಂಟ್ರಿ – ನೂತನ ಪಕ್ಷ ಘೋಷಣೆ..!

ತಮಿಳು ಚಿತ್ರರಂಗದ ಸೂಪರ್‌ಸ್ಟಾರ್ ತಳಪತಿ ವಿಜಯ್ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿದ್ದಾರೆ. ಇನ್ನು ಎರಡು ತಿಂಗಳಲ್ಲಿ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈ ಸಂದರ್ಭದಲ್ಲಿ ಅವರು ತಮ್ಮ ರಾಜಕೀಯ ಜೀವನ ಪ್ರವೇಶದ ಬಗ್ಗೆ ಘೋಷಣೆ ಮಾಡಿದ್ದಾರೆ. ಅವರ ನೂತನ ಪಕ್ಷಕ್ಕೆ ‘ತಮಿಳಿಗ ವೆಟ್ರಿ ಕಳಗಂ’ ಎಂದು ಹೆಸರನ್ನು ಘೋಷಿಸಿದ್ದಾರೆ.

ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ನಟ ವಿಜಯ್, ನಮ್ಮ ಪಕ್ಷ ‘ತಮಿಳಗ ವೆಟ್ರಿ ಕಳಗಂ’ ನ್ನು ನೋಂದಾಯಿಸಲು ಚುನಾವಣಾ ಆಯೋಗಕ್ಕೆ ಇಂದು ಅರ್ಜಿ ಸಲ್ಲಿಸುತ್ತಿದ್ದೇವೆ, ಮುಂಬರುವ 2026 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವುದು ಮತ್ತು ಮೂಲಭೂತ ರಾಜಕೀಯ ಬದಲಾವಣೆ ತರುವುದು ನಮ್ಮ ಗುರಿಯಾಗಿದೆ ಎಂದಿದ್ದಾರೆ.

ಅದೇ ರೀತಿ ನಾವು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಮತ್ತು ನಾವು ಯಾವುದೇ ಪಕ್ಷವನ್ನು ಬೆಂಬಲಿಸುವುದಿಲ್ಲ. ಸಾಮಾನ್ಯ ಮತ್ತು ಕಾರ್ಯಕಾರಿ ಮಂಡಳಿ ಸಭೆಗಾಗಿ ನಾವು ಈ ನಿರ್ಧಾರವನ್ನು ಮಾಡಿದ್ದೇವೆ ಎಂದು ಕೂಡ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ : ಬೆಂಗಳೂರಿನಲ್ಲಿ ಕಿಲ್ಲರ್​​ BMTCಗೆ ವಿದ್ಯಾರ್ಥಿನಿ ಬ*ಲಿ – ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here