Download Our App

Follow us

Home » ಅಪರಾಧ » ಮುರುಘಾ ಶ್ರೀಗಳ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ : ಸ್ವಾಮೀಜಿ ಮತ್ತೆ ಜೈಲು ಪಾಲು..!

ಮುರುಘಾ ಶ್ರೀಗಳ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ : ಸ್ವಾಮೀಜಿ ಮತ್ತೆ ಜೈಲು ಪಾಲು..!

ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಮುರುಘಾಶ್ರೀಗೆ ಸುಪ್ರೀಂಕೋರ್ಟ್​ನಲ್ಲಿ ಬಿಗ್ ಶಾಕ್ ಎದುರಾಗಿದೆ. ಚಿತ್ರದುರ್ಗದ ಮುರುಘಾಶ್ರೀಗೆ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಒಂದು ವಾರದಲ್ಲಿ ವಿಚಾರಣಾ ಕೋರ್ಟ್​ಗೆ ಹಾಜರಾಗಬೇಕು, 4 ರಿಂದ 6 ತಿಂಗಳೊಳಗೆ ತನಿಖೆ ಮುಗಿಸಬೇಕು ಎಂದು ಆದೇಶದ ವೇಳೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಮುರುಘಾಶ್ರೀ ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿದ್ದು, ಒಂದನೇ ಪೋಕ್ಸೋ ಕೇಸ್​ನಲ್ಲಿ ಮುರುಘಾಶ್ರೀಗೆ ಜಾಮೀನು ರದ್ದು ನೀಡಿದ್ದು, ನ್ಯಾಯಮೂರ್ತಿ ವಿಕ್ರಮ್​​ನಾಥ್ ಪೀಠ ಈ ಆದೇಶ ಹೊರಡಿಸಿದೆ. ಇದು ಅತ್ಯಂತ ಸೂಕ್ಷ್ಮ ಪ್ರಕರಣ ಎಂದು ಕೋರ್ಟ್ ಪರಿಗಣಿಸಿದೆ.

ಕೆಲ ತಿಂಗಳುಗಳ ಹಿಂದೆ ಸ್ವಾಮೀಜಿಗಳಿಗೆ ಕರ್ನಾಟಕ ಹೈಕೋರ್ಟ್‌ ಹಲವು ಷರತ್ತುಗಳೊಂದಿಗೆ ಜಾಮೀನು ನೀಡಿತ್ತು. ಬಳಿಕ ಅರ್ಜಿದಾರರು ಆರೋಪಿ ಬಂಧನದಿಂದ ಹೊರಗಿದ್ದು, ಸಾಕ್ಷಿ ನಾಶಪಡಿಸಬಹುದು ಎಂದು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಇಂದು ಪ್ರಕರಣ ವಿಚಾರಣೆ ಮಾಡಿದ ಸುಪ್ರೀಂ ಕೋರ್ಟ್‌ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಿ ಪುನಃ ನ್ಯಾಯಾಂಗ ಬಂಧನಕ್ಕೆ ಕಳುಹಿಸುವಂತೆ ಆದೇಶ ನೀಡಿದೆ.

ಏನಿದು ಪ್ರಕರಣ :

ಮುರುಘಾಶ್ರೀ ವಿರುದ್ಧ 2022 ಆಗಸ್ಟ್‌ 31 ರಂದು ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಸೆಪ್ಟೆಂಬರ್‌ 1ರಂದು ಬಂಧನವಾಗಿತ್ತು. ಸುಮಾರು 14 ತಿಂಗಳ ಕಾಲ ಜೈಲಿನಲ್ಲಿದ್ದ ಶ್ರೀಗಳು 2023 ನವೆಂಬರ್ 16ರಂದು ಷರತ್ತು ಬದ್ಧ ಜಾಮೀನಿನ ಮೇಲೆ ಹೊರಗೆ ಬಂದಿದ್ದರು.

ಇದನ್ನೂ ಓದಿ : ವಿಧಾನಸೌಧ ದುರ್ಬಳಕೆ : ಸರ್ಕಾರದ ಮುಖ್ಯ ಕಾರ್ಯದರ್ಶಿ, ಪ್ರತಿಭಟಿಸಿದ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ದೂರು..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here