Download Our App

Follow us

Home » ರಾಷ್ಟ್ರೀಯ » ದೆಹಲಿ ಅಬಕಾರಿ ನೀತಿ ಹಗರಣ – ಮನೀಶ್ ಸಿಸೋಡಿಯಾಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್..!

ದೆಹಲಿ ಅಬಕಾರಿ ನೀತಿ ಹಗರಣ – ಮನೀಶ್ ಸಿಸೋಡಿಯಾಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್..!

ದೆಹಲಿ : ಅಬಕಾರಿ ನೀತಿ ಹಗರಣದಲ್ಲಿ ಜೈಲುವಾಸ ಅನುಭವಿಸುತ್ತಿದ್ದ ಆಮ್​ ಆದ್ಮಿ ಪಕ್ಷದ ನಾಯಕ, ದೆಹಲಿ ಮಾಜಿ ಡಿಸಿಎಂ ಮನೀಶ್​ ಸಿಸೋಡಿಯಾಗೆ ಸುಪ್ರೀಂಕೋರ್ಟ್​ ಜಾಮೀನು ಮಂಜೂರು ಮಾಡಿದೆ.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್​ ಸಿಸೋಡಿಯಾ ಆಗಸ್ಟ್​ 6ರಂದು ಸಿಸೋಡಿಯಾ ಅರ್ಜಿಗಳ ಕುರಿತು ಸುಪ್ರೀಂಕೋರ್ಟ್​ ತನ್ನ ತೀರ್ಪು ಕಾಯ್ದಿರಿಸಿತ್ತು. ಇದೀಗ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, 530 ದಿನಗಳ ನಂತರ ಅಂದರೆ 17 ತಿಂಗಳಿಗೂ ಹೆಚ್ಚು ಕಾಲ ತಿಹಾರ್​ ಜೈಲಿನಲ್ಲಿದ್ದ ಮನೀಶ್​ ಸಿಸೋಡಿಯಾ ಹೊರಬರಲಿದ್ದಾರೆ.

ರದ್ದಾದ ದೆಹಲಿ ಅಬಕಾರಿ ನೀತಿ 2021-22ರ ರಚನೆ ಮತ್ತು ಅನುಷ್ಠಾನದಲ್ಲಿರುವ ಅಕ್ರಮಗಳಲ್ಲಿ ಭಾಗಿಯಾಗಿದ್ದಕ್ಕಾಗಿ 2023ರ ಫೆಬ್ರವರಿ 26 ರಂದು ಸಿಸೋಡಿಯಾ ಅವರನ್ನು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಬಂಧಿಸಿತ್ತು. ಇದಾದ ಬಳಿಕ ಸಿಬಿಐ ಎಫ್​ಐಆರ್​ಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅವರನ್ನು ಮಾರ್ಚ್​ 9ರಂದು ಬಂಧಿಸಿತ್ತು. ಸಿಸೋಡಿಯ ಅವರು ಫೆಬ್ರವರಿ 28 ಎಂದು ದೆಹಲಿ ಕ್ಯಾಬಿನೆಟ್​ಗೆ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ : BBMP ಕೇಂದ್ರ ಕಚೇರಿಯಲ್ಲಿ ಮತ್ತೊಂದು ಅಗ್ನಿ ಅವಘಡ – ತಪ್ಪಿದ ಭಾರೀ ಅನಾಹುತ..!

Leave a Comment

DG Ad

RELATED LATEST NEWS

Top Headlines

ಮೈಸೂರಿನಲ್ಲಿ ಹಾಡಹಗಲೇ ಮನೆ ಕಳ್ಳತನಕ್ಕೆ ಯತ್ನ – ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

ಮೈಸೂರು : ಮೈಸೂರಿನಲ್ಲಿ ಹಾಡುಹಗಲೇ ಮನೆಗಳ್ಳತನಕ್ಕೆ ಯತ್ನಿಸಿದ್ದ ಖದೀಮನ ಕಳ್ಳತನದ ಯತ್ನ ವಿಫಲವಾಗಿದೆ. ಜಿಲ್ಲೆಯ ಬನ್ನೂರಿನ ರಾಮದೇವರ ಬೀದಿಯಲ್ಲಿ ಜಯಮ್ಮ ಎಂಬುವರಿಗೆ ಸೇರಿದ ಮನೆಯಲ್ಲಿ ಕಳ್ಳತನದ ಯತ್ನ

Live Cricket

Add Your Heading Text Here