Download Our App

Follow us

Home » ರಾಷ್ಟ್ರೀಯ » ಕಿಡಿಗೇಡಿಗಳಿಂದ ಸುಪ್ರೀಂ ಕೋರ್ಟ್‌ನ ಅಧಿಕೃತ ಯೂಟ್ಯೂಬ್ ಚಾನೆಲ್​ ಹ್ಯಾಕ್..!

ಕಿಡಿಗೇಡಿಗಳಿಂದ ಸುಪ್ರೀಂ ಕೋರ್ಟ್‌ನ ಅಧಿಕೃತ ಯೂಟ್ಯೂಬ್ ಚಾನೆಲ್​ ಹ್ಯಾಕ್..!

ನವದೆಹಲಿ : ಸುಪ್ರೀಂ ಕೋರ್ಟ್‌ನ ಅಧಿಕೃತ ಯೂಟ್ಯೂಬ್ ಚಾನೆಲ್ ಅನ್ನೇ ಕಿಡಿಗೇಡಿಗಳು ಶುಕ್ರವಾರ ಹ್ಯಾಕ್ ಮಾಡಿದ್ದಾರೆ. ದೇಶದ ಸರ್ವೋಚ್ಚ ನ್ಯಾಯಾಲಯದ ಯೂಟ್ಯೂಬ್ ಚಾನೆಲ್ ಹ್ಯಾಕ್ ಮಾಡಿ ಅದರಲ್ಲಿ ಕ್ರಿಪ್ಟೋ ಕರೆನ್ಸಿ ಸೇರಿದಂತೆ ಇತರ ಪ್ರಮೋಷನ್ ವಿಡಿಯೋಗಳನ್ನು ಪೋಸ್ಟ್ ಮಾಡಲಾಗಿದೆ.

ಈ ಮಾಹಿತಿ ತಿಳಿಯುತ್ತಿದ್ದಂತೆ ತಾಂತ್ರಿಕ ತಂಡ ಸುಪ್ರೀಂ ಕೋರ್ಟ್ ಯೂಟ್ಯೂಬ್ ಚಾನೆಲ್ ತಾತ್ಕಾಲಿಕ ಸ್ಥಗಿತಗೊಳಿಸಿ ಸರಿಪಡಿಸುವ ಕಾರ್ಯ ಆರಂಭಿಸಿದೆ. ಕಿಡಿಗೇಡಿಗಳು ಸುಪ್ರೀಂ ಕೋರ್ಟ್ ಯೂಟ್ಯೂಬ್ ಚಾನೆಲ್ ಹ್ಯಾಕ್ ಮಾಡಿದ ಬಳಿಕ US ಮೂಲದ Ripple Labs ಜಾಹೀರಾತು ವಿಡಿಯೋಗಳನ್ನು ಪೋಸ್ಟ್ ಮಾಡಿದ್ದಾರೆ. ಈ ಪೈಕಿ ಕ್ರಿಪ್ಟೋಕರೆನ್ಸಿ, ಎಕ್ಸ್ಆರ್‌ಪಿ ಸೇರಿದಂತೆ ಇತರ ಕೆಲ ವಿಡಿಯೋಗಳನ್ನು ಪೋಸ್ಟ್ ಮಾಡಿದ್ದಾರೆ.

 

ಸದ್ಯ ಯೂಟ್ಯೂಬ್ ಚಾನೆಲ್ ಮರುಸ್ಥಾಪನೆಗೆ ಪ್ರಯತ್ನ ನಡೆಯುತ್ತಿದೆ. ಯಾರು ಹ್ಯಾಕ್ ಮಾಡಿದ್ದಾರೆ ಅನ್ನೋದರ ಬಗ್ಗೆ ಇನ್ನೂ ಸರಿಯಾದ ಮಾಹಿತಿ ಇಲ್ಲ. ಸುಪ್ರೀಂ ಕೋರ್ಟ್‌ನ ಐಟಿ ತಂಡವು ರಾಷ್ಟ್ರೀಯ ಮಾಹಿತಿ ಕೇಂದ್ರ (ಎನ್‌ಐಸಿ)ಯೊಂದಿಗೆ ಸಂಪರ್ಕದಲ್ಲಿದೆ.

ಸುಪ್ರೀಂ ಕೋರ್ಟ್ ತನ್ನ ಯೂಟ್ಯೂಬ್ ಚಾನೆಲ್ ಮೂಲಕ ವಿಚಾರಣೆಗಳ ನೇರ ಪ್ರಸಾರ ಮಾಡುತ್ತದೆ. ಇತ್ತೀಚೆಗೆ ಕೋಲ್ಕತ್ತಾದ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದ್ದ ಪ್ರಕರಣದ ವಿಚಾರಣೆಯ ನೇರ ಪ್ರಸಾರ ಈ ಚಾನಲ್‌ನಲ್ಲಿ ಹಾಕಲಾಗಿತ್ತು. ಈ ವೀಡಿಯೊಗಳು YouTube ಚಾನಲ್‌ನಿಂದ ಕಾಣೆಯಾಗಿವೆ.

ಇದನ್ನೂ ಓದಿ : ಬಿಗ್ ಬಾಸ್​ಗಾಗಿ ಕಾಯ್ತಿದ್ದವರಿಗೆ ಶಾಕಿಂಗ್ ನ್ಯೂಸ್.. ಈ ಸಲ ಯಾಕೆ ಹೀಗ್ಮಾಡಿದ್ರು ಎಂದ ಫ್ಯಾನ್ಸ್..!

Leave a Comment

DG Ad

RELATED LATEST NEWS

Top Headlines

ತಿರುಪತಿ ಲಡ್ಡುವಿನಲ್ಲಿ ಕೊಬ್ಬಿನಾಂಶ ಇದ್ದಿದ್ದು ನಿಜ – ತಪ್ಪೊಪ್ಪಿಕೊಂಡ ಟಿಟಿಡಿ..!

ಆಂಧ್ರಪ್ರದೇಶ : ತಿರುಪತಿ ದೇವಸ್ಥಾನದ ಲಡ್ಡು ತಯಾರಿಸಲು ಕಲಬೆರಕೆ ತುಪ್ಪ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ಟಿಟಿಡಿ ಸ್ಪಷ್ಟನೆ ನೀಡಿದೆ. ಈ ಬಗ್ಗೆ ಮಾಹಿತಿ ನೀಡಿದ ಟಿಟಿಡಿ

Live Cricket

Add Your Heading Text Here