ಯಾದಗಿರಿ : ಯಾದಗಿರಿ ಜಿಲ್ಲೆ ಸುರಪುರ MLA ರಾಜಾ ವೆಂಕಟಪ್ಪ ನಾಯಕ ಅವರ ಅಂತ್ಯ ಸಂಸ್ಕಾರ ಇಂದು ಹುಟ್ಟೂರಿನಲ್ಲಿ ನಡೆಯಲಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಶಾಸಕ ರಾಜಾ ವೆಂಕಟಪ್ಪ ನಾಯಕ ನಿನ್ನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.
ಸುರಪುರ ವಿಧಾನಸಭಾ ಕ್ಷೇತ್ರವನ್ನು ಕಾಂಗ್ರೆಸ್ ಭದ್ರಕೋಟೆಯಾಗಿ ಕಟ್ಟಿದ್ದ ವೆಂಕಟಪ್ಪ ನಾಯಕ 1994ರಿಂದ ನಾಲ್ಕು ಬಾರಿ ಗೆದ್ದು ಬಂದಿದ್ದರು. ಖರ್ಗೆಯವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ರಾಜಾ ವೆಂಕಟಪ್ಪ ನಾಯಕ ಅವರಿಗೆ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನವನ್ನೂ ನೀಡಲಾಗಿತ್ತು. ಅವರ ನಿಧನದಿಂದ ಕ್ಷೇತ್ರದಲ್ಲಿ ನೀರವ ಮೌನ ಆವರಿಸಿದೆ.
ಅಂತ್ಯ ಸಂಸ್ಕಾರದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಸಚಿವರು, ಶಾಸಕರೂ ಭಾಗಿಯಾಗಲಿದ್ದಾರೆ. ಸಂಜೆ 4 ಗಂಟೆಗೆ ಸುರಪುರದಲ್ಲಿ ಪ್ಯಾಪ್ಲಿ ಮನೆತನದ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಯಲಿದೆ. ಬೆಂಗಳೂರಿನಿಂದ ಪಾರ್ಥೀವ ಶರೀರ ಶಿಫ್ಟ್ ಆಗಿದ್ದು ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಇದನ್ನೂ ಓದಿ : ನೆಲಮಂಗಲದಲ್ಲಿ ವ್ಹೀಲಿಂಗ್ ಹುಚ್ಚಾಟಕ್ಕೆ ಯುವಕ ಬ*ಲಿ..!