Download Our App

Follow us

Home » ಸಿನಿಮಾ » ಡ್ರೀಮ್ ವಾರಿಯರ್ ಪಿಕ್ಚರ್ಸ್ ಜೊತೆ ಕೈ ಜೋಡಿಸಿದ ನಟ ಸೂರ್ಯ – 45ನೇ ಸಿನಿಮಾ ಅನೌನ್ಸ್..!

ಡ್ರೀಮ್ ವಾರಿಯರ್ ಪಿಕ್ಚರ್ಸ್ ಜೊತೆ ಕೈ ಜೋಡಿಸಿದ ನಟ ಸೂರ್ಯ – 45ನೇ ಸಿನಿಮಾ ಅನೌನ್ಸ್..!

ದಕ್ಷಿಣ ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಗಳಲ್ಲಿ ಒಂದು ಡ್ರೀಮ್ ವಾರಿಯರ್ ಪಿಕ್ಚರ್ಸ್. ಈ ಸಂಸ್ಥೆಯಡಿ ಧೀರನ್, ಅರುವಿ, ಎನ್‌ಜಿಕೆ, ರಾಕ್ಷಸಿ, ಖೈದಿ, ಭೋಲಾ ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರಗಳು ನಿರ್ಮಾಣಗೊಂಡಿವೆ. ಇದೀಗ ಡ್ರೀಮ್ ವಾರಿಯರ್ ಪಿಕ್ಚರ್ಸ್ ತಮಿಳಿನ ಸೂಪರ್ ಸ್ಟಾರ್ ಸೂರ್ಯ ಜೊತೆ ಕೈ ಜೋಡಿಸಿದೆ. ಈ ಸಂಸ್ಥೆಯಡಿ ಸೂರ್ಯ ಅವರ 45ನೇ ಚಿತ್ರ ನಿರ್ಮಾಣವಾಗಲಿದೆ.

ಮೂಕುತಿ ಅಮ್ಮನ್ ಮತ್ತು ವೀಟ್ಲ ವಿಶೇಷಂನಂತಹ ಸಾಮಾಜಿಕ ಜವಾಬ್ದಾರಿಯುತ ಚಿತ್ರಗಳನ್ನು ನಿರ್ದೇಶಿಸಲು ಹೆಸರುವಾಸಿಯಾಗಿರುವ ಆರ್‌ಜೆ ಬಾಲಾಜಿ ಸೂರ್ಯ ಅವರ 45ನೇ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ. RJ ಬಾಲಾಜಿ ಪ್ರಸ್ತುತ ಈ ಸಿನಿಮಾದ ಪ್ರೀ ಪ್ರೊಡಕ್ಷನ್ ಕೆಲಸಲ್ಲಿ ಬ್ಯುಸಿಯಾಗಿದ್ದಾರೆ.

ಆರ್‌ಜೆ ಬಾಲಾಜಿ ಅವರ ಚಿತ್ರಕಥೆ ಇಷ್ಟಪಟ್ಟಿರುವ ಆಸ್ಕರ್ ವಿಜೇತ ಎ.ಆರ್ ರೆಹಮಾನ್ ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಲು ಸಮ್ಮತಿ ಸೂಚಿಸಿದ್ದಾರೆ. ಈ ಹಿಂದೆ ಸೂರ್ಯ ಹಾಗೂ ರೆಹಮಾನ್ ಸಿಲ್ಲುನು ಒರು ಕಾದಲ್, ಆಯುಧ ಎಳುತ್ತು ಮತ್ತು ’24’ ನಂತಹ ಕ್ಲಾಸಿಕ್ ಚಿತ್ರಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು.

ಆರ್‌ಜೆ ಬಾಲಾಜಿ ಮತ್ತು ಡ್ರೀಮ್ ವಾರಿಯರ್ ಪಿಕ್ಚರ್ಸ್ ಈ ಪ್ರತಿಷ್ಠಿತ ಪ್ರಾಜೆಕ್ಟ್ ಗೆ ಸೂರ್ಯ ಜೊತೆಗೆ ಹಲವು ದೊಡ್ಡ ತಾರಾಬಳಗ ಸೇರ್ಪಡೆಯಾಗಲಿದೆ. ನವೆಂಬರ್ 2024 ಶೂಟಿಂಗ್ ಹೊರಡಲಿರುವ ಚಿತ್ರತಂಡ 2025 ರ ದ್ವಿತೀಯಾರ್ಧದಲ್ಲಿ ಚಿತ್ರ ಬಿಡುಗಡೆ ಮಾಡುವ ಯೋಜನೆ ಹಾಕಿಕೊಂಡಿದೆ.

ಇದನ್ನೂ ಓದಿ : ಬಿಗ್ ಬಾಸ್ ಮನೆಯಲ್ಲಿ ಸಹನೆ ಕಳೆದುಕೊಂಡ ಸ್ಪರ್ಧಿಗಳು – ರೊಚ್ಚಿಗೆದ್ದ ಜಗದೀಶ್..!

Leave a Comment

DG Ad

RELATED LATEST NEWS

Top Headlines

ಪ್ಲೀಸ್‌ ಒಂದು ಚಾನ್ಸ್​ ಕೊಡಿ ಬಿಗ್​ಬಾಸ್… ಜಗದೀಶ್, ರಂಜಿತ್ ಹೊರಹೋಗ್ತಿದ್ದಂತೆ ಕಣ್ಣೀರಿಟ್ಟ ಸ್ಪರ್ಧಿಗಳು..!

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಶಾಕಿಂಗ್ ಬೆಳವಣಿಗೆ ನಡೆಯುತ್ತಿದೆ. ಸ್ಪರ್ಧಿಗಳೆಲ್ಲರೂ ಜಗದೀಶ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಇದರಿಂದ ಜಗದೀಶ್ ಕೋಪಗೊಂಡು ಮಹಿಳಾ ಸ್ಪರ್ಧಿಗಳ ವಿರುದ್ಧ ಅಶ್ಲೀಲ

Live Cricket

Add Your Heading Text Here