ಅಯೋಧ್ಯೆ : ಇಂದು ದೇಶಾದ್ಯಂತ ರಾಮನವಮಿ ಆಚರಿಸಲಾಗುತ್ತಿದ್ದು, ಅಯೋಧ್ಯೆಯಲ್ಲಿ ಶ್ರೀರಾಮನವಮಿ ಸಂಭ್ರಮ ಮುಗಿಲು ಮುಟ್ಟಿದೆ. ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠೆಯಿಂದಾಗಿ ಈ ಬಾರಿಯ ರಾಮನವಮಿ ಸಂಭ್ರಮ ವಿಶೇಷವಾಗಿದೆ.
ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಬಳಿಕ ಮೊದಲ ರಾಮನವಮಿಯನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ. ಇಂದು ಸುಮಾರು 12ಗಂಟೆಗೆ ರಾಮ್ ಲಲ್ಲಾನ ಹಣೆಯ ಮೇಲೆ ಸೂರ್ಯ ರಶ್ಮಿ ಸ್ಪರ್ಶವಾಗಿದೆ. ನಾಲ್ಕು ನಿಮಿಷಗಳ ಕಾಲ ಬಾಲರಾಮನ ಹಣೆಯ ಮೇಲೆ ಸೂರ್ಯತಿಲಕ ಮೂಡಿದೆ. ಈ ಬಗ್ಗೆ ಇತ್ತೀಚೆಗೆ ವಿಜ್ಞಾನಿಗಳು ಪರೀಕ್ಷಾರ್ಥ ಪ್ರಯೋಗವನ್ನೂ ಮಾಡಿದ್ದು, ಇದೀಗ ಸೂರ್ಯತಿಲಕ ಯಶಸ್ವಿಯಾಗಿ ಮೂಡಿಬಂದಿದೆ.
ಅಯೋಧ್ಯೆಯ ರಾಮ ಮಂದಿರಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು ಬೆಳಗ್ಗೆಯೇ ಆಗಮಿಸಿ ಬಾಲಕ ರಾಮನ ದರ್ಶನ ಪಡೆಯುತ್ತಿದ್ದಾರೆ. ರಾಮಮಂದಿರದಲ್ಲಿ ಬೆಳಗಿನ ಜಾವ 3.30ಕ್ಕೆ ದರ್ಶನ ಆರಂಭವಾಗಿದ್ದು, ಆಗಿನಿಂದಲೇ ಭಕ್ತರು ನಿರಂತರ ದರ್ಶನದಲ್ಲಿ ತೊಡಗಿದ್ದಾರೆ.
ಇದನ್ನೂ ಓದಿ : ಯುಪಿಎಸ್ಸಿ ಪರೀಕ್ಷೆಯಲ್ಲಿ ರಾಜ್ಯದ 25 ಮಂದಿಗೆ ರ್‍ಯಾಂಕ್ – ವಿಜಯಪುರದ ವಿಜೇತ ರಾಜ್ಯಕ್ಕೆ ಟಾಪರ್..!