ಬೆಂಗಳೂರು : ಬೆಂಗಳೂರಿನ ಲಾಡ್ಜ್ವೊಂದರಲ್ಲಿ ತೀರ್ಥಹಳ್ಳಿ ತಹಶೀಲ್ದಾರ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಜಕ್ಕಣ್ಣಗೌಡರ್(56) ಮೃತ ತಹಶೀಲ್ದಾರ್. ಜಕ್ಕಣ್ಣಗೌಡರ್ ಅವರು ಬೆಂಗಳೂರಿಗೆ ಅ.14ರಂದು ಆಗಮಿಸಿ ಖಾಸಗಿ ಲಾಡ್ಜ್ ನಲ್ಲಿ ಉಳಿದುಕೊಂಡಿದ್ದರು. ಆದ್ರೆ, ನಿನ್ನೆ ರಾತ್ರಿ 9ರ ಸುಮಾರಿಗೆ ಅವರು ಲಾಡ್ಜ್ ರೂಮ್ನಲ್ಲಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ಗದಗ ಮೂಲದ 56 ವರ್ಷದ ಜಕ್ಕಣ್ಣ ಗೌಡರ್, ಕೋರ್ಟ್ ಕೆಲಸಕ್ಕೆಂದು ಬೆಂಗಳೂರಿಗೆ ಬಂದಿದ್ದು, ಅ.14ರಂದು ಖಾಸಗಿ ಲಾಡ್ಜ್ ಬುಕ್ ಮಾಡಿದ್ದರು. ಆದ್ರೆ, ನಿನ್ನೆ ಬೆಳಗ್ಗೆಯಿಂದ ಕುಟುಂಬಸ್ಥರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಕೂಡಲೇ ತೀರ್ಥಹಳ್ಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಬಳಿಕ ತೀರ್ಥಹಳ್ಳಿ ಪೊಲೀಸರು ಕೂಡಲೇ ಬೆಂಗಳೂರು ಪೊಲೀಸರಿಗೆ ಸಂಪರ್ಕ ಮಾಡಿದ್ದಾರೆ. ನಂತರ ರಾತ್ರಿ 8ರ ಸುಮಾರಿಗೆ ಲಾಡ್ಜ್ಗೆ ಉಪ್ಪಾರಪೇಟೆ ಪೊಲೀಸರು ಭೇಟಿ ನೀಡಿ, ರೂಮ್ ಬಾಗಿಲು ಓಪನ್ ಮಾಡಿದ್ದಾರೆ. ಆಗ ಜಕ್ಕಣ್ಣ ಗೌಡರ್ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ಮೇಲ್ನೋಟಕ್ಕೆ ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎನ್ನಲಾಗುತ್ತಿದೆ. ಆದ್ರೆ ಇದುವರೆಗೆ ಸಾವಿನ ಬಗ್ಗೆ ನಿಖರ ಮಾಹಿತಿ ಸಿಕ್ಕಿಲ್ಲ. ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಎಲ್ಲಾ ಪರೀಕ್ಷೆ ಮುಗಿದ ಬಳಿಕ ಪೊಲೀಸರು, ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಿದ್ದಾರೆ.
ಇದನ್ನೂ ಓದಿ : ಮಾಜಿ ಮಂತ್ರಿ ಮುನಿರತ್ನಗೆ ಮತ್ತೊಂದು ಸಂಕಷ್ಟ – ಬಿಜೆಪಿ MLCಯಿಂದಲೇ ಮುನಿರತ್ನ ವಿರುದ್ದ ಕೇಸ್..!