Download Our App

Follow us

Home » ಮೆಟ್ರೋ » ಬೆಂಗಳೂರಿನಲ್ಲಿ ಯುವತಿ ಅನುಮಾನಸ್ಪದ ಸಾ*ವು : ಬಾತ್ ರೂಂನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಶವ ಪತ್ತೆ..!

ಬೆಂಗಳೂರಿನಲ್ಲಿ ಯುವತಿ ಅನುಮಾನಸ್ಪದ ಸಾ*ವು : ಬಾತ್ ರೂಂನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಶವ ಪತ್ತೆ..!

ಬೆಂಗಳೂರು : ಬೆಂಗಳೂರಿನಲ್ಲಿ ಯುವತಿಯೊಬ್ಬಳ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. 21 ವರ್ಷದ ಪ್ರಭುಧ್ಯಾ ಮೃತ ಯುವತಿ. ಈಕೆ ನಗರದ ಖಾಸಗಿ ಕಾಲೇಜಿನಲ್ಲಿ ದ್ವೀತಿಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಳು.

ಮನೆಯ ಬಾತ್ ರೂಂನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿದೆ. ಈ ಘಟನೆ ನಿನ್ನೆ ಸಂಜೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಪ್ರಕರಣ ಸುಬ್ರಹ್ಮಣ್ಯ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಯುಡಿಆರ್ ದಾಖಲಿಸಿಕೊಂಡು ಯುವತಿಯ ಸಾವು ಆತ್ಮಹತ್ಯೆಯೋ, ಕೊಲೆಯೋ ಅನ್ನೊ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಘಟನೆ ನಡೆದ ವೇಳೆ ಮನೆಯಲ್ಲಿ ಯಾರು ಇರಲಿಲ್ಲ. ತಾಯಿ ಹೊರಗೆ ಕೆಲಸಕ್ಕೆ ಹೋಗಿದ್ರು. ಮೃತಳ ತಮ್ಮ ಮನೆಗೆ ಬಂದು ನೋಡಿದಾಗ ಸಹೋದರಿ ಪ್ರಭುಧ್ಯಾ ಸಾವನ್ನಪ್ಪಿರೋದು ಬೆಳಕಿಗೆ ಬಂದಿದೆ. ಸದ್ಯ ಪೊಲೀಸರು ಮೃತ ಯುವತಿಯ ಮೊಬೈಲ್ ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ.

ಇದನ್ನೂ ಓದಿ : ಪತ್ನಿಗೆ ವಿಡಿಯೋ ಕಾಲ್​ ಮಾಡುತ್ತಲೇ ಪತಿ ಸಾವು – ಹೆದರಿಸಲು ಹೋಗಿ ಹೆಣವಾದ ಜಿಮ್​​ ಟ್ರೈನರ್​​​..!

Leave a Comment

DG Ad

RELATED LATEST NEWS

Top Headlines

ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್​ – ಭೋಪಾಲ್​ನಲ್ಲಿ ಆರೋಪಿ ಅಭಿಷೇಕ್​ ಅರೆಸ್ಟ್​..!

ಬೆಂಗಳೂರು : ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಆರೋಪಿ ಅಭಿಷೇಕ್​ನನ್ನು ಇದೀಗ ಬೆಂಗಳೂರು ಪೊಲೀಸರು ಭೂಪಾಲ್​ನಲ್ಲಿ ಬಂಧಿಸಿದ್ದಾರೆ. ಜು.23 ರಂದು ಕೋರಮಂಗಲದ ಪಿಜಿಯಲ್ಲಿ

Live Cricket

Add Your Heading Text Here