ಸೆಂಚೂರಿಯನ್ : ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 4 ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಭಾರತ 11 ರನ್‌ಗಳಿಂದ ದಕ್ಷಿಣ ಆಫ್ರಿಕಾವನ್ನು ಮಣಿಸಿದೆ. ಈ ಮೂಲಕ ಸೂರ್ಯ ಪಡೆ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ.
ನಿನ್ನೆ ಸೆಂಚೂರಿಯನ್ ನ ಸೂಪರ್ ಸ್ಪೋರ್ಟ್ ಪಾರ್ಕ್ ನಲ್ಲಿ ನಡೆದ 3ನೇ ಟಿ20 ಪಂದ್ಯದಲ್ಲಿ ಭಾರತ ನೀಡಿದ್ದ 220ರನ್ ಗಳ ಬೃಹತ್ ಗುರಿಯನ್ನು ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡ 7 ವಿಕೆಟ್ ನಷ್ಟಕ್ಕೆ 208 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಗಿ, 11 ರನ್ ಗಳ ಅಂತರದಲ್ಲಿ ಸೋಲು ಕಂಡಿತು. ಭಾರತದ ಪರ ವರಣ್ ಚಕ್ರವರ್ತಿ 2 ಮತ್ತು ಅರ್ಶ್ ದೀಪ್ ಸಿಂಗ್ 3 ವಿಕೆಟ್ ಪಡೆದರೆ, ಹಾರ್ದಿಕ್ ಪಾಂಡ್ಯಾ ಮತ್ತು ಅಕ್ಸರ್ ಪಟೇಲ್ ತಲಾ 1 ವಿಕೆಟ್ ಪಡೆದರು.
ದಾಖಲೆಯ ಚೊಚ್ಚಲ ಟಿ20 ಶತಕ ಸಿಡಿಸಿದ ತಿಲಕ್ ವರ್ಮಾ : ಭಾರತದ ಪರ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಯುವ ಬ್ಯಾಟ್ಸ್‌ಮನ್ ತಿಲಕ್ ವರ್ಮಾ ಕೇವಲ 51 ಎಸೆತಗಳಲ್ಲಿ ಶತಕ ಸಿಡಿಸಿ ತಮ್ಮ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ ದಾಖಲಿಸಿದರು. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ ಭಾರತದ 11ನೇ ಆಟಗಾರ ಎಂಬ ಹೆಗ್ಗಳಿಕೆಗೆ ತಿಲಕ್ ಪಾತ್ರರಾದರು. ವಿಶೇಷವಾಗಿ ಸೂರ್ಯಕುಮಾರ್ ಯಾದವ್ ಕಣಕ್ಕಿಳಿಯುತ್ತಿದ್ದ 2ನೇ ಕ್ರಮಾಂಕದಲ್ಲಿ ಕ್ರೀಸ್ಗಿಳಿದ ತಿಲಕ್, ಕೊನೆಯವರೆಗೂ ಅಜೇಯರಾಗಿ ಉಳಿದು ತಂಡವನ್ನು 219 ರನ್ಗಳಿಗೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರವಹಿಸಿದರು.
ಇದನ್ನೂ ಓದಿ : ಇನ್‌ಸ್ಟಾಗ್ರಾಮ್‌ನಲ್ಲಿ ಕಣ್ಣೀರಿಟ್ಟ ಕಿರುತೆರೆ ನಟಿ ಸ್ನೇಹಾ! ಸೀರಿಯಲ್ ಬಿಟ್ಮೇಲೆ ಪುಟ್ಟಕ್ಕನ ಮಗಳಿಗೆ ಇದೇನಾಯ್ತು?