Download Our App

Follow us

Home » ಮೆಟ್ರೋ » ಕನ್ನಡ ಕಲಾ ಲೋಕದ ಅಪರೂಪದ ಪ್ರತಿಭೆ – ನಮ್ಮ ಮೆಟ್ರೋಗೆ ಧ್ವನಿಯಾಗಿದ್ದ ನಿರೂಪಕಿ ಅಪರ್ಣಾ ಇನ್ನು ನೆನಪು ಮಾತ್ರ..!

ಕನ್ನಡ ಕಲಾ ಲೋಕದ ಅಪರೂಪದ ಪ್ರತಿಭೆ – ನಮ್ಮ ಮೆಟ್ರೋಗೆ ಧ್ವನಿಯಾಗಿದ್ದ ನಿರೂಪಕಿ ಅಪರ್ಣಾ ಇನ್ನು ನೆನಪು ಮಾತ್ರ..!

ಬೆಂಗಳೂರು : ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ ನಿಧನರಾಗಿದ್ದಾರೆ. ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅಪರ್ಣಾ ಅವರು ನಿನ್ನೆ ತಮ್ಮ ಬೆಂಗಳೂರಿನ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ನಿರೂಪಕಿಯಾಗಿ ಮಾತ್ರವಲ್ಲದೇ ನಟಿಯಾಗಿಯೂ ಅಪರ್ಣಾ ಗುರುತಿಸಿಕೊಂಡಿದ್ದರು. ಅಷ್ಟೇ ಅಲ್ಲದೇ ಹಲವು ಸೀರಿಯಲ್​ಗಳಲ್ಲಿ ನಟಿಸಿ ಖ್ಯಾತಿ ಗಳಿಸಿದ್ರು.

ಅಪರ್ಣಾ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ ಮತ್ತು ನಿರೂಪಕಿಯಾಗಿದ್ದರು. 1984 ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್​ರ ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದರು. ನಂತರ ಇನ್ಸ್‌ಪೆಕ್ಟರ್ ವಿಕ್ರಮ್ ಮೊದಲಾದ ಚಿತ್ರಗಳಲ್ಲಿ ನಟಿಸಿದ್ದರು. 90ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳನ್ನು ಅಪರ್ಣಾ ನಿರೂಪಕಿಯಾಗಿ ನಡೆಸಕೊಟ್ಟಿದ್ದಾರೆ. ನಂತರ ಭಾರತ ಸರ್ಕಾರದ ವಿವಿಧ ಭಾರತಿಯಲ್ಲಿ ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ. 1998 ರಲ್ಲಿ ನಡೆದ ದೀಪಾವಳಿ ಕಾರ್ಯಕ್ರವೊಂದನ್ನು ಎಂಟು ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು.

ನಮ್ಮ ಮೆಟ್ರೋಗೆ ಧ್ವನಿಯಾಗಿದ್ದ ಅಪರ್ಣಾ : ಯಶಸ್ವಿ ನಿರೂಪಕಿಯಾಗಿ 3 ದಶಕಗಳ ವರೆಗೆ ಕನ್ನಡ ಸೇವೆ ಸಲ್ಲಿಸಿದ ಅಪರ್ಣಾ, 2014 ರಲ್ಲಿ ಬೆಂಗಳೂರಿನ ʻನಮ್ಮ ಮೆಟ್ರೋʼದಲ್ಲಿ ಘೋಷಣೆಯಾಗುವ `ಪ್ರಯಾಣಿಕರು ಹತ್ತುವ, ಮತ್ತು ಇಳಿಯುವ ಸೂಚನೆʼಗೆ ಧ್ವನಿ ಗೂಡಿಸಿದ್ದರು. ಅಪರ್ಣಾ ಧ್ವನಿ ಮೆಟ್ರೋ ಪ್ರಯಾಣಿಕರ ಕಿವಿ ಹಾಗೂ ಮನಸ್ಸು ತಟ್ಟಿತ್ತು. ನಮ್ಮ ಮೆಟ್ರೋ ಅನೌನ್ಸ್​ಮೆಂಟ್​ ಸೇರಿದಂತೆ ಅನೇಕ ಪ್ರಕಟಣೆಗಳಿಗೆ ಅವರು ಧ್ವನಿ ನೀಡಿದ್ದರು. ಅಚ್ಚಕನ್ನಡ ಮಾತಾಡುವ ನಿರೂಪಕಿ ಆಗಿ ಅಪರ್ಣಾ ಜನಪ್ರಿಯರಾಗಿದ್ರು. ತನ್ನ ಮಾತುಗಾರಿಕೆಯಿಂದಲೇ ಅಪರ್ಣ ಅಪಾರ ಅಭಿಮಾನಿಗಳನ್ನು ಗಳಿಸಿದ್ರು. ಇದೀಗ ನಟಿ ನಿರೂಪಕಿ ಅಪರ್ಣಾ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ : ಪ್ರೀತಿಯ ಮಡದಿ ಸಾವಿಗೆ ಅಪರ್ಣಾ ಪತಿ ಭಾವುಕ : ಹೇಳಿದ್ದೇನು?

Leave a Comment

DG Ad

RELATED LATEST NEWS

Top Headlines

ನಕಲಿ ನಕ್ಷೆ ಸೃಷ್ಟಿಸಿ ಕಟ್ಟಡ ನಿರ್ಮಾಣ – ಮಾಲೀಕನ ವಿರುದ್ಧ FIR ದಾಖಲು..!

ಬೆಂಗಳೂರು : ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತ ದುರಂತದ ಬೆನ್ನಲ್ಲೇ ಬಿಬಿಎಂಪಿ ಎಚ್ಚೆತ್ತುಕೊಂಡಿದೆ. ನಕಲಿ ನಕ್ಷೆ ತಯಾರಿಸಿ ಕಟ್ಟಡ ನಿರ್ಮಿಸಿರುವ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ರಾಜರಾಜೇಶ್ವರಿನಗರ

Live Cricket

Add Your Heading Text Here