Download Our App

Follow us

Home » ಅಪರಾಧ » ತಮಿಳುನಾಡು ಬಿಎಸ್​ಪಿ ರಾಜ್ಯಾಧ್ಯಕ್ಷ ಆರ್ಮ್​ಸ್ಟ್ರಾಂಗ್​ ಬರ್ಬರ ಹತ್ಯೆ – ಮನೆ ಮುಂದೆ ಇರಿದು ಕೊಂದ ದುಷ್ಕರ್ಮಿಗಳು..!

ತಮಿಳುನಾಡು ಬಿಎಸ್​ಪಿ ರಾಜ್ಯಾಧ್ಯಕ್ಷ ಆರ್ಮ್​ಸ್ಟ್ರಾಂಗ್​ ಬರ್ಬರ ಹತ್ಯೆ – ಮನೆ ಮುಂದೆ ಇರಿದು ಕೊಂದ ದುಷ್ಕರ್ಮಿಗಳು..!

ಚೆನ್ನೈ : ತಮಿಳುನಾಡಿನ ಬಹುಜನ ಸಮಾಜ ಪಕ್ಷದ (ಬಿಎಸ್​ಪಿ) ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್ ಅವರನ್ನು ದುಷ್ಕರ್ಮಿಗಳ ಗ್ಯಾಂಗ್‌ವೊಂದು ಬರ್ಬರವಾಗಿ ಹತ್ಯೆ ಮಾಡಿದೆ. ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಚೆನ್ನೈ ಪೆರಂಬೂರಿನಲ್ಲಿರುವ ಆರ್ಮ್‌ಸ್ಟ್ರಾಂಗ್ ಅವರ ನಿವಾಸದ ಬಳಿಯೇ ಘಟನೆ ನಡೆದಿದ್ದು, ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

6 ಮಂದಿ ದುಷ್ಕರ್ಮಿಗಳ ಗ್ಯಾಂಗ್‌ನಿಂದ ಹತ್ಯೆ ನಡೆದಿದ್ದು, ಚೆನ್ನೈನ ಸೆಂಬಿಯಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದು, ಹಂತಕರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಹತ್ಯೆ ನಡೆದಿದ್ದು ಹೇಗೆ? ಶುಕ್ರವಾರ ಸಂಜೆ 6 ಗಂಟೆ ಸುಮಾರಿಗೆ ಸೆಂಬಿಯಂನ ಜನನಿಬಿಡ ಪ್ರದೇಶದಲ್ಲಿ ಆರ್ಮ್‌ಸ್ಟ್ರಾಂಗ್ ತಮ್ಮ ಸ್ನೇಹಿತರು ಹಾಗೂ ಬೆಂಬಲಿಗರೊಂದಿಗೆ ಮಾತನಾಡುತ್ತಿದ್ದರು. ಈ ವೇಳೆ ಮೂರು ಬೈಕ್‌ಗಳಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಬಂದಿದ್ದ 6 ಜನರ ಗ್ಯಾಂಗ್‌ ಏಕಾಏಕಿ ಅವರ ಮೇಲೆ ದಾಳಿ ನಡೆಸಿದೆ. ಅಲ್ಲಿದ್ದ ಜನರು ಅವರ ರಕ್ಷಣೆಗೆ ಮುಂದಾಗುವಷ್ಟರಲ್ಲೇ ಗ್ಯಾಂಗ್‌, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಎಸ್ಕೇಪ್‌ ಆಗಿದೆ. ನಂತರ ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನ ಕುಟುಂಬಸ್ಥರು ಕೂಡಲೇ ಥೌಸಂಡ್ ಲೈಟ್‌ನ ಗ್ರೀಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಷ್ಟರಲ್ಲಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಬಳಿಕ ಪುಲಿಯನ್‌ತೋಪ್ ಉಪ ಪೊಲೀಸ್ ಆಯುಕ್ತರು, ಸಹಾಯಕ ಪೊಲೀಸ್ ಆಯುಕ್ತರು ಹತ್ಯೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ಪತ್ತೆಗೆ ಸೆಂಬಿಯಂ ಪೊಲೀಸ್ ಇನ್ಸ್‌ಪೆಕ್ಟರ್ ಚಿರಂಜೀವಿ ನೇತೃತ್ವದಲ್ಲಿ ವಿಶೇಷ ತಂಡವನ್ನು ನಿಯೋಜಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ : ರೇಣುಕಾಸ್ವಾಮಿ ಕೊಲೆ ಕೇಸ್​ – ವಿಚಾರಣೆಗೆ ಹಾಜರಾದ ಮಾಜಿ ಉಪಮೇಯರ್ ಮೋಹನ್​ ರಾಜ್..!

Leave a Comment

DG Ad

RELATED LATEST NEWS

Top Headlines

ದರ್ಶನ್​ ಕೇಸ್​ನ​​ಲ್ಲಿ ಪೊಲೀಸರಿಂದ ಮಿಸ್ಟೇಕ್​​​ ಮೇಲೆ ಮಿಸ್ಟೇಕ್ – ಸ್ಫೋಟಕ ಮಾಹಿತಿ ಬಿಚ್ಚಿಟ್ಟ ವಕೀಲ ಸಿ.ವಿ. ನಾಗೇಶ್..!

ಬೆಂಗಳೂರು : ರೇಣುಕಾಸ್ವಾಮಿ ಕೇಸ್​ನಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಇಂದು 57ನೇ ಸಿಸಿಹೆಚ್ ಕೋರ್ಟ್​​ನಲ್ಲಿ ನಡೆದಿದ್ದು, ದರ್ಶನ್ ಪರ ಹಿರಿಯ ವಕೀಲ

Live Cricket

Add Your Heading Text Here