Download Our App

Follow us

Home » ಸಿನಿಮಾ » ಡೇವಿಡ್ ಅವರ “ಪೆನ್ ಡ್ರೈವ್”ನಲ್ಲಿ ಬಿಗ್ ಬಾಸ್ ಖ್ಯಾತಿಯ ತನಿಷಾ ಕುಪ್ಪಂಡ..! 

ಡೇವಿಡ್ ಅವರ “ಪೆನ್ ಡ್ರೈವ್”ನಲ್ಲಿ ಬಿಗ್ ಬಾಸ್ ಖ್ಯಾತಿಯ ತನಿಷಾ ಕುಪ್ಪಂಡ..! 

ಲಯನ್ ಆರ್ ವೆಂಕಟೇಶ್ ಹಾಗೂ ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ “ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ ಅಭಿನಯದ ನೂತನ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ಇತ್ತೀಚಿಗೆ ನಡೆಯಿತು.

ಚಿತ್ರಕ್ಕೆ “ಪೆನ್ ಡ್ರೈವ್” ಎಂದು ಹೆಸರಿಡಲಾಗಿದೆ‌. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷರಾದ ಎನ್ನಾರ್ ಕೆ ವಿಶ್ವನಾಥ್ ಈ ಚಿತ್ರದ ಶೀರ್ಷಿಕೆ ಅನಾವರಣ ಮಾಡಿ ಶುಭ ಕೋರಿದರು. ವೆಂಕಟೇಶ್, ನರಸಿಂಹಲು ಮುಂತಾದವರು ಮುಖ್ಯ ಅತಿಥಿಗಳಾಗಿ ಶೀರ್ಷಿಕೆ ಅನಾವರಣ ಸಮಾರಂಭಕ್ಕೆ ಆಗಮಿಸಿದ್ದರು.

ಶೀರ್ಷಿಕೆ ಅನಾವರಣ ಸಮಾರಂಭದಲ್ಲಿ ನಿರ್ದೇಶಕ ಸೆಬಾಸ್ಟಿನ್ ಡೇವಿಡ್ ಸಿನಿಮಾದ ಬಗ್ಗೆ ಒಂದಷ್ಟು ಮಾಹಿತಿ ಹಂಚಿಕೊಂಡಿದ್ದಾರೆ. “ಈವರೆಗೂ ಹದಿನೈದು ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿದ್ದೇನೆ. “ಪೆನ್ ಡ್ರೈವ್” ಶೀರ್ಷಿಕೆ ನೀಡಿದ ವಾಣಿಜ್ಯ ಮಂಡಳಿಗೆ ಧನ್ಯವಾದ. ಪ್ರಸ್ತುತ ಚಾಲ್ತಿಯಲ್ಲಿರುವ “ಪೆನ್ ಡ್ರೈವ್”ಗು ನಮ್ಮ ಚಿತ್ರದ ಶೀರ್ಷಿಕೆಗೂ ಯಾವುದೇ ಸಂಬಂಧವಿಲ್ಲ. ಈ ಚಿತ್ರದ ಕಥೆಯೇ ಬೇರೆ. ನಮ್ಮ ಚಿತ್ರದಲ್ಲಿ “ಪೆನ್ ಡ್ರೈವ್” ಮುಖ್ಯಪಾತ್ರ ವಹಿಸುತ್ತದೆ. ಹಾಗಾಗಿ ಆ ಶೀರ್ಷಿಕೆ ಆಯ್ಕೆ ಮಾಡಿಕೊಳ್ಳಲಾಗಿದೆ.

ಲಯನ್ ಎಸ್ ವೆಂಕಟೇಶ್ ಹಾಗೂ ಲಯನ್ ಆರ್ ವೆಂಕಟೇಶ್ ಅವರ ಸಹಕಾರದಿಂದ ಚಿತ್ರವನ್ನು ಬೇಗೆ ತೆರೆಗೆ ತರುವ ಪ್ರಯತ್ನ ಮಾಡುತ್ತೇನೆ. ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ. ಹೆಚ್ಚಿನ ಚಿತ್ರೀಕರಣ ಬೆಂಗಳೂರಿನಲ್ಲೇ ನಡೆಯಲಿದೆ. ತನಿಷಾ ಕುಪ್ಪಂಡ, ರಾಧಿಕಾ ರಾಮ್, ಸಂಜನಾ ನಾಯ್ಡು, ಅರ್ಚನ, ರೇಣುಕಾ, ಗೀತಾ, ಭಾಗ್ಯ, ಗೀತಪ್ರಿಯ, ಕರಿಸುಬ್ಬು ಮುಂತಾದವರು ತಾರಾಬಳಗದಲ್ಲಿದ್ದಾರೆ. ತಾರಾಬಳಗದಲ್ಲಿ ಹೆಚ್ಚಿನವರು ಮಹಿಳೆಯರೆ ಇರುತ್ತಾರೆ. ಡಾ||ವಿ.ನಾಗೇಂದ್ರ ಪ್ರಸಾದ್ ಗೀತರಚನೆ ಹಾಗೂ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ‌ ಎಂದರು.

ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು ಹಾಗಾಗಿ ಈ ಚಿತ್ರ ನಿರ್ಮಾಣಕ್ಕೆ ಮುಂದಾದೆವು. ನಮ್ಮ ಚಿತ್ರಕ್ಕೆ ಎಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕರಾದ ಲಯನ್ ಎಸ್ ವೆಂಕಟೇಶ್ ಹಾಗೂ ಲಯನ್ ಆರ್ ವೆಂಕಟೇಶ್.  “ಪೆನ್ ಡ್ರೈವ್” ಚಿತ್ರದ ಕಥೆ ಚೆನ್ನಾಗಿದೆ. ನಾನು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಕೊಳ್ಳುತ್ತಿದ್ದೇನೆ ಎಂದು ನಟಿ ತನಿಷಾ ಕುಪ್ಪಂಡ ಹೇಳಿದ್ದಾರೆ. ಸಂಭಾಷಣೆ ಬರೆದು ಸಂಕಲನ ಮಾಡುತ್ತಿರುವ ನಾಗೇಶ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ : “ಕಲ್ಕಿ 2898 ಎಡಿ” ಸಿನಿಮಾ ನೋಡಲು ಜಪಾನ್‌ನಿಂದ ಹೈದರಾಬಾದ್‌ಗೆ ಬಂದ ಪ್ರಭಾಸ್‌ ಫ್ಯಾನ್ಸ್‌..!

 

 

 

 

Leave a Comment

DG Ad

RELATED LATEST NEWS

Top Headlines

ಅನಾವರಣವಾಯ್ತು ‘ಅಪಾಯವಿದೆ ಎಚ್ಚರಿಕೆ’ ಚಿತ್ರದ ಟೀಸರ್.. ಪ್ರೇಕ್ಷಕರು ಫಿದಾ..!

ಇತ್ತೀಚೆಗೆ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದ ”ಅಪಾಯವಿದೆ ಎಚ್ಚರಿಕೆ” ಚಿತ್ರತಂಡ ಅದರ ವಿಶೇಷತೆಯಿಂದ ನಿರೀಕ್ಷೆ ಹುಟ್ಟಿಸಿತ್ತು. ನಂತರ “ಬ್ಯಾಚುಲರ್ ಬದುಕು” ಅನ್ನುವ ಸಾಂಗ್ ಬಿಡುಗಡೆಗೊಳಿಸಿ, ಎಲ್ಲಾ ಬ್ಯಾಚುಲರ್ಸ್

Live Cricket

Add Your Heading Text Here