ವರ್ಷಕ್ಕೊಮ್ಮೆ ದರ್ಶನ ಭಾಗ್ಯ ಕರುಣಿಸೋ ಹಾಸನಾಂಬೆ ದರ್ಶನ ಆರಂಭವಾಗಿದೆ. ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸಮ್ಮುಖದಲ್ಲಿ ಬಾಗಿಲು ತೆರೆಯಲಾಗಿದೆ. ಹಾಸನಾಂಬೆ ದೇವಾಲಯಕ್ಕೆ ಭಕ್ತರು ಸೇರಿದಂತೆ ಅನೇಕ ಗಣ್ಯರು ಭೇಟಿ ಕೊಟ್ಟಿದ್ದಾರೆ.
ಇದೀಗ ಮದುವೆ ಬಳಿಕ ಮೊದಲ ಬಾರಿ ನಿದೇರ್ಶಕ ತರುಣ್ ಸುಧೀರ್ ಹಾಗೂ ಸೋನಾಲ್ ಮೊಂಥೆರೋ ಅವರು ಹಾಸನಾಂಬೆ ದೇಗುಲಕ್ಕೆ ಭೇಟಿ ನೀಡಿದ್ದಾರೆ. ತಾಯಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ.
ನಿರ್ದೇಶಕ ತರುಣ್ ಸುಧೀರ್ ಮತ್ತು ನಟಿ ಸೋನಲ್ ಮೊಂಥೆರೋ ಅವರ ಅದ್ಧೂರಿ ವಿವಾಹ ಕಳೆದ ಆಗಸ್ಟ್ 11ರಂದು ಬೆಂಗಳೂರಿನ ನಡೆದಿದೆ. ಹಿಂದೂ ಸಂಪ್ರದಾಯದಂತೆ ಮದುವೆ ನಡೆದಿತ್ತು. ಸೋನಲ್ ಅವರ ಹುಟ್ಟುಹಬ್ಬದಂದೇ ಮದುವೆಯಾಗಿದ್ದು ವಿಶೇಷವೇ.
ಕೊನೆಗೆ ಜೋಡಿ ಮಂಗಳೂರಿನಲ್ಲಿ ಕ್ರೈಸ್ತ ಸಮುದಾಯದಂತೆ ಮದುವೆ ಮಾಡಿಕೊಂಡಿತು. ಇದಕ್ಕೆ ಕಾರಣ ಸೋನಲ್ ಅವರು ಕ್ರೈಸ್ತ ಸಮುದಾಯಕ್ಕೆ ಸೇರಿದವರು. ಈ ದಂಪತಿ ತಮ್ಮ ವೈವಾಹಿಕ ಜೀವನವನ್ನು ಸಂತಸದಿಂದ ಕಳೆಯುತ್ತಿದ್ದಾರೆ.
ಇದನ್ನೂ ಓದಿ : ಒಂದ್ ಫೂಟ್ ಜಮೀನು ವಕ್ಫ್ಗೆ ಬಿಟ್ಟು ಕೊಡಲ್ಲ- ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ..!
Post Views: 8