ನರೇಂದ್ರ ಮೋದಿ ಅವರು ಭಾರತದ ಪ್ರಧಾನಿಯಾಗಿ ಮೂರನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಿದರು. ಈಶ್ವರನ ಹೆಸರಿನಲ್ಲಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ರಾಷ್ಟ್ರಪತಿ ದೌಪ್ರದಿ ಮುರ್ಮು ಅವರು ನರೇಂದ್ರ ಮೋದಿ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದ್ದು, ಪ್ರಧಾನಿ ಅವರ ಜೊತೆ ನೂತನ ಕೇಂದ್ರ ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡಿದ್ರು.
ಬಿಹಾರದ ಮಾಜಿ ಮುಖ್ಯಮಂತ್ರಿ ಹಾಗೂ ಎನ್‌ಡಿಎ ಮೈತ್ರಿಕೂಟದ ಭಾಗವಾಗಿರುವ ಹಿಂದೂಸ್ತಾನ್ ಅವಾಮಿ ಮೋರ್ಚಾ ಪಕ್ಷದ ನಾಯಕ ಜಿತನ್ ರಾಮ್ ಮಾಂಝಿ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಬಿಹಾರದ ಜೆಡಿಯು ಸಂಸದ ರಾಜೀವ್ ರಂಜನ್ ಸಿಂಗ್ ಅಲಿಯಾಸ್ ಲಲನ್ ಸಿಂಗ್ ಅವರು ನೀತೆಶ್ ಕುಮಾರ್ ಅವರ ಜೆಡಿಯು ಕೋಟಾದಿಂದ ಮೋದಿ ಸಂಪುಟಕ್ಕೆ ಸೇರ್ಪಡೆಯಾದರು.
ಆಂಧ್ರಪ್ರದೇಶದ ತೆಲುಗು ದೇಶಂ ಪಕ್ಷದ ಸಂಸದ ಕಿಂಜಪುರ ರಾಮ್ ಮೋಹನ್ ನಾಯ್ಡ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಶ್ರೀಕಾಕುಳಂ ಕ್ಷೇತ್ರದ ಸಂಸದರಾಗಿರುವ ನಾಯ್ಡು, 36ನೇ ವಯಸ್ಸಿನಲ್ಲಿಯೇ ಕೇಂದ್ರ ಸಚಿವರಾಗುವ ಅವಕಾಶ ಪಡೆದಿದ್ದಾರೆ.