Download Our App

Follow us

Home » ಕ್ರೀಡೆ » ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಡೇವಿಡ್ ಜಾನ್ಸನ್ ನಿಧನ..!

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಡೇವಿಡ್ ಜಾನ್ಸನ್ ನಿಧನ..!

ಬೆಂಗಳೂರು : ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಡೇವಿಡ್ ಜಾನ್ಸನ್ ನಿಧನರಾಗಿದ್ದಾರೆ. ಇಂದು ಮಧ್ಯಾಹ್ನ 12.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಕೊತ್ತನೂರು ಠಾಣಾ ವ್ಯಾಪ್ತಿಯ ಕನಕಶ್ರೀ ಲೇಔಟ್​​ನ 4ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಡೇವಿಡ್ ಜಾನ್ಸನ್ ಅವರು ಅನಾರೋಗ್ಯದಿಂದ  ಬಿಲ್ಡಿಂಗ್​​​ನಿಂದ ಬಿದ್ದು ಆತ್ಯಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇನ್ನು ಘಟನ ಸ್ಥಳಕ್ಕೆ ಕೊತ್ತನೂರು ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಕರ್ನಾಟಕದ ಹಾಸನದ ಅರಸೀಕೆರೆ ಮೂಲದವರಾದ ಡೇವಿಡ್ ಜಾನ್ಸನ್ ಭಾರತ ಪರ 2 ಟೆಸ್ಟ್‌ ಪಂದ್ಯಗಳನ್ನಾಡಿದ್ದ ಹೆಮ್ಮೆಯ ಕನ್ನಡಿಗನಾಗಿ ಗುರುತಿಸಿಕೊಂಡಿದ್ದರು. ಆದರೀಗ ಇವರ ಸಾವು ಕ್ರಿಕೆಟ್​ ಪ್ರಿಯರಿಗೆ ನೋವು ತಂದಿದೆ.

1971ರ ಅಕ್ಟೋಬರ್ 16ರಂದು ಹಾಸನ ಜಿಲ್ಲೆಯ ಅರಸಿಕೆರೆಯಲ್ಲಿ ಜನಿಸಿದ ಡೇವಿಡ್ ಜಾನ್ಸನ್, ಟೀಂ ಇಂಡಿಯಾ ಪರ ಎರಡು ಟೆಸ್ಟ್ ಪಂದ್ಯಗಳನ್ನಾಡಿ ಮೂರು ವಿಕೆಟ್ ಕಬಳಿಸಿದ್ದರು. ಆ ಕಾಲಘಟ್ಟದಲ್ಲಿ ಟೀಂ ಇಂಡಿಯಾ ಪರ ಅತಿವೇಗದ ಬೌಲಿಂಗ್ ಮಾಡಿದ ದಾಖಲೆ ಡೇವಿಡ್ ಜಾನ್ಸನ್ ಅವರ ಹೆಸರಿನಲ್ಲಿತ್ತು. 1996ರಲ್ಲಿ ಭಾರತ ಟೆಸ್ಟ್ ತಂಡಕ್ಕೆ ಪಾದಾರ್ಪಣೆ ಮಾಡಿದ್ದ ಡೇವಿಡ್ ಜಾನ್ಸನ್, ಆಸ್ಟ್ರೇಲಿಯಾ ತಂಡವು ಭಾರತ ಪ್ರವಾಸ ಮಾಡಿದ್ದಾಗ ಟೀಂ ಇಂಡಿಯಾ ಪರ ಕಣಕ್ಕಿಳಿದಿದ್ದರು. ಆ ಸರಣಿಯಲ್ಲಿ ಡೇವಿಡ್ ಜಾನ್ಸನ್ ಗಂಟೆಗೆ 157.8 ಕಿಲೋ ಮೀಟರ್ ವೇಗದಲ್ಲಿ ಬೌಲಿಂಗ್ ಮಾಡಿ ಸಾಧನೆ ಮಾಡಿದ್ದರು.

ಇನ್ನು ಡೇವಿಡ್ ಜಾನ್ಸನ್‌ ಒಟ್ಟು 39 ಪ್ರಥಮ ದರ್ಜೆ ಕ್ರಿಕೆಟ್ ಪಂದ್ಯಗಳನ್ನಾಡಿ 125 ವಿಕೆಟ್ ಕಬಳಿಸಿ ಮಿಂಚಿದ್ದರು. ಇನ್ನು ಕೆಳಕ್ರಮಾಂಕದಲ್ಲಿ ಉಪಯುಕ್ತ ಬ್ಯಾಟರ್ ಆಗಿ ಗುರುತಿಸಿಕೊಂಡಿದ್ದ ಜಾನ್ಸನ್ 437 ರನ್ ಬಾರಿಸಿದ್ದಾರೆ.

ಇದನ್ನೂ ಓದಿ : ಬಿಸಿಲ ಬೇಗೆಗೆ ತುತ್ತಾದ ಸೌದಿ ಅರೇಬಿಯಾ – 900ಕ್ಕೂ ಹೆಚ್ಚು ಹಜ್ ಯಾತ್ರಿಕರು ಸಾವು..!

 

 

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here