Download Our App

Follow us

Home » ಸಿನಿಮಾ » ಮೇಘಾ ಶೆಟ್ಟಿ ನಟನೆಯ ‘ಆಪರೇಷನ್ ಲಂಡನ್ ಕೆಫೆ’ ಚಿತ್ರದ ಟೀಸರ್​ಗೆ ಸಿನಿಪ್ರಿಯರು ಫಿದಾ..!

ಮೇಘಾ ಶೆಟ್ಟಿ ನಟನೆಯ ‘ಆಪರೇಷನ್ ಲಂಡನ್ ಕೆಫೆ’ ಚಿತ್ರದ ಟೀಸರ್​ಗೆ ಸಿನಿಪ್ರಿಯರು ಫಿದಾ..!

ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್ ನಲ್ಲಿ ಕನ್ನಡ, ಮರಾಠಿ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ‘ಆಪರೇಷನ್ ಲಂಡನ್ ಕೆಫೆ‘ ಚಿತ್ರದ ಚಿತ್ರೀಕರಣ ಈಗಾಗಲೇ ಮುಕ್ತಾಯಗೊಂಡು ಪೋಸ್ಟ್ ಪ್ರೊಡಕ್ಷನ್ ಕೆಲಸ ಬಿರುಸಿನಿಂದ ಸಾಗಿದೆ. ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರದ ಟೀಸರ್ ಬಿಡುಗಡೆಯಾಗಿ ಸೋಷಿಯಲ್ ಮೀಡಿಯಾದಲ್ಲಿ ಪ್ರೇಕ್ಷಕರಿಂದ ಭರ್ಜರಿ ಫಲಿತಾಂಶವನ್ನು ಕಾಣುತ್ತಿದೆ. ಇನ್ನು ಟೀಸರ್ ಬಿಡುಗಡೆ ಮಾಡಿದ ಚಿತ್ರತಂಡ ಸುದ್ದಿಗೋಷ್ಠಿಯಲ್ಲಿ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಂಡಿದೆ.

ಚಿತ್ರದ ನಿರ್ದೇಶಕ ಸಡಗರ ರಾಘವೇಂದ್ರ ಅವರು ಮಾತನಾಡಿ, ನಾನು ಕನ್ನಡದ ಹೆಸರಾಂತ ನಿರ್ದೇಶಕರ ಜೊತೆ ಹಲವಾರು ವರ್ಷಗಳಿಂದ ಕೆಲಸ ಮಾಡಿದ ನಂತರ ಇದೇ ಮೊದಲ ಬಾರಿಗೆ ತನ್ನ ಚೊಚ್ಚಲ ಚಿತ್ರದ ನಿರ್ದೇಶನ ಮಾಡಿದ್ದೇನೆ. ಇದೊಂದು ನಕ್ಸಲಿಸಂ ಬೇಸಾಗಿಟ್ಟಿಕೊಂಡು ಹೆಣೆದಿರುವ ಕಥೆ‌.‌ ಹಾಗಂತ ನಕ್ಸಲಿಸಂನ ವೈಭವಿಕರಿಸಿಲ್ಲ. ಯಾವುದೇ ಒಬ್ಬ ವ್ಯಕ್ತಿಯ ಕುರಿತಾದ ಚಿತ್ರವೂ ಇದಲ್ಲ. ಇದು ಆಫ್ಟರ್ “ಆಪರೇಷನ್ ಲಂಡನ್ ಕೆಫೆ”. ನೀವು ಮೊದಲು ನೋಡುವುದು ಚಿತ್ರದ ಪ್ರೀಕ್ವೆಲ್. ಮೊದಲ ಭಾಗ ಆನಂತರ ಬರಲಿದೆ. ಕನ್ನಡ ಹಾಗೂ ಮರಾಠಿ ಎರಡೂ ಭಾಷೆಯಲ್ಲಿ ನೇರವಾಗಿ ಚಿತ್ರೀಕರಣ ಮಾಡಲಾಗಿದೆ‌. ಉಳಿದಂತೆ ಹಿಂದಿ, ತೆಲುಗು, ತಮಿಳು ಹಾಗೂ ಮಲೆಯಾಳಂನಲ್ಲೂ ಚಿತ್ರ ಬಿಡುಗಡೆಯಾಗಲಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

“ಮುಂಗಾರು ಮಳೆ 2” ಚಿತ್ರದಿಂದ ನನ್ನ ಸಿನಿ ಜರ್ನಿ ಆರಂಭವಾಯಿತು. ನಂತರ 2020 ರಲ್ಲಿ “ಜಿಲ್ಕಾ” ಚಿತ್ರದಲ್ಲಿ ನಟಿಸಿದ್ದೆ. ಸಡಗರ ರಾಘವೇಂದ್ರ ಅವರ ಕಾರ್ಯವೈಖರಿಯನ್ನು ಹತ್ತಿರದಿಂದ ಕಂಡಿದ್ದ ನನಗೆ ಅವರ ಮೊದಲ ನಿರ್ದೇಶನದಲ್ಲಿ ನನ್ನದೊಂದು ಚಿತ್ರ ಮಾಡುವ ಆಸೆಯಿತ್ತು. ಈ ಚಿತ್ರದ ಮೂಲಕ ಅದು ಈಡೇರಿದೆ ಎಂದು ನಾಯಕ ಕವೀಶ್ ಶೆಟ್ಟಿ ತಿಳಿಸಿದರು.

ಮೇಘಾ ಶೆಟ್ಟಿ ಮಾತಾಡುತ್ತಾ, ನಾನು ಮರಾಠಿ ಕಲಿತು ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ. ನಿರ್ದೇಶಕರಾಗಿ ಸಡಗರ ರಾಘವೇಂದ್ರ ಅವರು ತಮ್ಮ ಮೊದಲ ನಿರ್ದೇಶನದಲ್ಲೇ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಒಳ್ಳೆಯ ತಂಡದ ಜೊತೆಗೆ ಕೆಲಸ ಮಾಡಿರುವ ಖುಷಿಯಿದೆ ಎಂದು ಹೇಳಿದ್ದಾರೆ.

ಇಂಡಿಯನ್ ಫಿಲ್ಮ್ ಫ್ಯಾಕ್ಟರಿ ಮತ್ತು ದೀಪಕ್ ರಾಣೆ ಫಿಲಂ ಲಾಂಛನದಡಿಯಲ್ಲಿ ವಿಜಯ್ ಕುಮಾರ್ ಶೆಟ್ಟಿ ಹವರಾಲ್, ರಮೇಶ್ ಕೊಠಾರಿ ಮತ್ತು ದೀಪಕ್ ರಾಣೆ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಎನ್.ಡಿ. ನಾಗಾರ್ಜುನ್ ಛಾಯಾಗ್ರಹಣ ಮಾಡಿದ್ದಾರೆ. ಮಾಸ್ ಮಾದ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಅರ್ಜುನ್ ಕಾಪಿಕ್ಕಾಡ್, ವಿರಾಟ್ ಮಡಕೆ ಮುಂತಾದವರು ಕೂಡ ಸುದ್ದಿಗೋಷ್ಠಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ : ಉಡುಪಿ : ಐಟಿ ದಾಳಿ ನೆಪದಲ್ಲಿ ದರೋಡೆಗೆ ಸಂಚು ಪ್ರಕರಣ – ಇಬ್ಬರು ಆರೋಪಿಗಳ ಬಂಧನ..

 

Leave a Comment

DG Ad

RELATED LATEST NEWS

Top Headlines

ಹುಬ್ಬಳ್ಳಿ-ಪುಣೆ ವಂದೇ ಭಾರತ್​ ರೈಲಿಗೆ ಇಂದು ಪ್ರಧಾನಿ ಮೋದಿ ಚಾಲನೆ..!

ದೇಶದ ಮೊದಲ ವಂದೇ ಭಾರತ್​ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಲಿದ್ದಾರೆ. ಗುಜರಾತ್​ನ ಭುಜ್​-ಅಹ್ಮದಾಬಾದ್​ ನಡುವೆ ವಂದೇ ಭಾರತ್​ ಮೆಟ್ರೋ ಸಂಚಾರ ಮಾಡಲಿದೆ. 100-250

Live Cricket

Add Your Heading Text Here