Download Our App

Follow us

Home » ಸಿನಿಮಾ » ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್​ ಬರ್ತಡೇಗೆ ‘ಭೈರತಿ ರಣಗಲ್’ ಚಿತ್ರದ ಟೀಸರ್ ರಿಲೀಸ್..!

ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್​ ಬರ್ತಡೇಗೆ ‘ಭೈರತಿ ರಣಗಲ್’ ಚಿತ್ರದ ಟೀಸರ್ ರಿಲೀಸ್..!

ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್​ ನಟನೆಯ ‘ಭೈರತಿ ರಣಗಲ್’ ಸಿನಿಮಾ ನರ್ತನ್ ನಿರ್ದೇಶನದಲ್ಲಿ ಅದ್ಧೂರಿಯಾಗಿ ಮೂಡಿಬರುತ್ತಿದ್ದು, ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿರುವ ಈ ಚಿತ್ರ ಇದೀಗ, ದೊಡ್ಡ ಅಚ್ಚರಿಯೊಂದನ್ನು ಎಲ್ಲರ ಮುಂದಿಡಲು ರೆಡಿಯಾಗಿದೆ. ಅಂದರೆ ಶಿವಣ್ಣನ ಬರ್ತಡೇಗೆ ಭೈರತಿ ರಣಗಲ್ ಚಿತ್ರದ ಟೀಸರ್ ಬಿಡುಗಡೆ ಆಗಲಿದೆ. ಈ ಟೀಸರ್ ಅನ್ನು First Verdict ಎಂದು ಚಿತ್ರತಂಡ ಕರೆದುಕೊಂಡಿದೆ.

ಗೀತಾ ಪಿಕ್ಚರ್ಸ್ ಅಡಿಯಲ್ಲಿ ಭೈರತಿ ರಣಗಲ್ ಸಿನಿಮಾವನ್ನು ಗೀತಾ ಶಿವರಾಜಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ. ವೇದ ಸಿನಿಮಾ ಯಶಸ್ಸಿನ ಬಳಿಕ ಗೀತಾ ಪಿಕ್ಚರ್ಸ್ ನಿರ್ಮಾಣ ಮಾಡ್ತಿರುವ ಎರಡನೇ ಸಿನಿಮಾ ಇದು. ಅಂದಹಾಗೆ ಮಫ್ತಿ ಸಿನಿಮಾದ ಪ್ರೀಕ್ವೆಲ್ ಇದಾಗಿದ್ದು, ನರ್ತನ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಈ ಚಿತ್ರದಲ್ಲಿ ಶಿವಣ್ಣ ಲಾಯರ್ ಆಗಿ ಅಭಿನಯಿಸುತ್ತಿದ್ದಾರೆ.

ಆನಂದ್ ಆಡಿಯೋಗೆ ಭೈರತಿ ಹಕ್ಕುಗಳು

ಆನಂದ್ ಆಡಿಯೋ ಸಂಸ್ಥೆ ಭೈರತಿ ರಣಗಲ್ ಚಿತ್ರದ ಆಡಿಯೋ ಹಕ್ಕುಗಳನ್ನು ದೊಡ್ಡ ಮೊತ್ತಕ್ಕೆ ಪಡೆದುಕೊಂಡಿದೆ. ಈ ವರ್ಷ ತೆರೆಕಾಣುತ್ತಿರುವ ಕನ್ನಡದ ದೊಡ್ಡ ಸಿನಿಮಾ ಇದು. ಇದೀಗ ಚಿತ್ರದ ಜೊತೆ ಕೈ ಜೋಡಿಸಿರುವುದು ನಮಗೂ ಖುಷಿ ತಂದಿದೆ. ಪ್ರಚಾರ ಕೆಲಸವೂ ದೊಡ್ಡ ಮಟ್ಟದಲ್ಲಿಯೇ ಸಾಗಲಿದೆ ಎಂದಿದ್ದಾರೆ ಆನಂದ್ ಆಡಿಯೋದ ಶ್ಯಾಮ್ ಚಾಬ್ರಿಯಾ.

ಕೆಲ ಮೂಲಗಳ ಪ್ರಕಾರ, ಆನಂದ್ ಆಡಿಯೋ ಭೈರತಿ ರಣಗಲ್ ಚಿತ್ರದ ಆಡಿಯೋ ಹಕ್ಕನ್ನು ಬಹುಕೋಟಿ ಕೊಟ್ಟು ಖರೀದಿಸಿದೆಯಂತೆ. ಇನ್ನೇನು ಶೀಘ್ರದಲ್ಲಿ ಬಿಡುಗಡೆ ದಿನಾಂಕ ಘೋಷಣೆ ಮಾಡಲಿದ್ದು, ಚಿತ್ರಮಂದಿರದಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿಯೇ ಸಿನಿಮಾ ರಿಲೀಸ್ ಆಗಲಿದೆ.

ಇದನ್ನೂ ಓದಿ : ಬೆಂಗಳೂರಿನಲ್ಲಿ ಧಗಧಗನೆ ಹೊತ್ತಿ ಉರಿದ BMTC ಬಸ್ : ತಪ್ಪಿದ ಅನಾಹುತ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here