Download Our App

Follow us

Home » ಸಿನಿಮಾ » ವರುಣ್ ಗಂಗಾಧರ್ ನಿರ್ದೇಶನದ ‘ಸ್ವರಾಜ್ಯ 1942’ ಚಿತ್ರದ ಟೀಸರ್ ರಿಲೀಸ್..!

ವರುಣ್ ಗಂಗಾಧರ್ ನಿರ್ದೇಶನದ ‘ಸ್ವರಾಜ್ಯ 1942’ ಚಿತ್ರದ ಟೀಸರ್ ರಿಲೀಸ್..!

ಕಮರ್ಷಿಯಲ್ ಸಿನಿಮಾಗಳ ಭರಾಟೆ ನಡುವೆ ಕನ್ನಡದಲ್ಲೊಂದು ಕ್ರಾಂತಿಕಾರಿ ಸಿನಿಮಾ ತಯಾರಾಗಿದೆ. ಅದುವೇ ‘ಸ್ವರಾಜ್ಯ 1942’. 4ನೇ ತರಗತಿಯ ಪಠ್ಯ ಪುಸ್ತಕದಲ್ಲಿರುವ ಹುತಾತ್ಮ ಬಾಲಕ ಕಥೆ ಈಗ ಸಿನಿಮಾವಾಗಿದೆ. ಈ ಹಿಂದೆ ಹತ್ಯೆ ಸಿನಿಮಾ ನಿರ್ದೇಶಿಸಿದ್ದ ವರುಣ್ ಗಂಗಾಧರ್ ‘ಸ್ವರಾಜ್ಯ 1942’ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಈ ಸಿನಿಮಾದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗಷ್ಟೇ ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ನಡೆಯಿತು.

ಟೀಸರ್ ಬಿಡುಗಡೆ ಬಳಿಕ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಂಡ ನಿರ್ದೇಶಕ ವರುಣ್ ಗಂಗಾಧರ್ ಅವರು, ನಾನು ಈ ಹಿಂದೆ ಹತ್ಯೆ ಎಂಬ ಸಿನಿಮಾ ಮಾಡಿದ್ದೆ. ಆ ಚಿತ್ರದಲ್ಲಿ ಮಗ ಸಣ್ಣ ಪಾತ್ರ ಮಾಡಿದ್ದ. ಸ್ವರಾಜ್ಯ ನಾನೇ ಎಲ್ಲವನ್ನೂ ಹ್ಯಾಂಡಲ್ ಮಾಡಿದ್ದೇನೆ. ಸಿನಿಮಾ ಮಡುವುದು ಬಹಳ ಸುಲಭ ಅನಿಸಿತು. 1942ರಲ್ಲಿಯೇ ಹುಬ್ಬಳ್ಳಿಯ ಹುಡುಗ ಸ್ವಾತಂತ್ರ್ಯ ಹೋರಾಟಗಾರನಾಗಿ ಎಂಬುದನ್ನು ಜಗತ್ತಿಗೆ ಪರಿಚಯಿಸಲು ಈ ಚಿತ್ರ ಮಾಡಿದ್ದೇನೆ. ಶಾಲೆಯ ಪಠ್ಯ ಪುಸ್ತಕವನ್ನು ಸಿನಿಮಾ ರೂಪಕ್ಕೆ ತಂದಿದ್ದೇನೆ. ಶಾಲಾ ಮಕ್ಕಳಿಗೂ ಈ ಚಿತ್ರ ತೋರಿಸುವ ಐಡಿಯಾ ಇದೆ ಎಂದರು.

ಹುಬ್ಬಳ್ಳಿ ಮೂಲದ ಬಾಲಕನೊಬ್ಬ ಹುಬ್ಬಳ್ಳಿಯಲ್ಲಿ ನಡೆಯುತ್ತಿದ್ದ ಕ್ವೀಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಲು ಹೊರಟಾಗ ಬ್ರಿಟಿಷರ ಗುಂಡೆಂಟಿಗೆ ಹುತಾತ್ಮನಾದ ಕಥೆಯೇ ‘ಸ್ವರಾಜ್ಯ 1942’. 14ನೇ ವಯಸ್ಸಿನಲ್ಲಿ ದೇಶಕ್ಕಾಗಿ ಹೋರಾಡುವ ಉತ್ಸಾಹ ತೋರಿದ ಆ ಹುತಾತ್ಮರ ಮಾಹಿತಿ ಕಲೆ ಹಾಕಿ ಕುಟುಂಬದವರ ಒಪ್ಪಿಗೆ ಮೇರೆಗೆ ಸಿನಿಮಾ ಮಾಡಲಾಗಿದೆ. ನಿರ್ದೇಶಕ ವರುಣ್ ಗಂಗಾಧರ್ ಈ ಚಿತ್ರದ ಮೂಲಕ ತಮ್ಮ ಮಗನನ್ನು ಇಂಡಸ್ಟ್ರೀಗೆ ಪರಿಚಯಿಸಿದ್ದಾರೆ.

‘ಸ್ವರಾಜ್ಯ 1942’ ಚಿತ್ರದಲ್ಲಿ ಮಾಸ್ಟರ್ ವರುಣ್ ಜಿ, ಯಶ್ ರಾಜ್ ಕಾರಜೋಳ್, ಓಂ ಕಾರಜೋಳ್, ಆದ್ಯ ಕಾರಜೋಳ್, ವೀಣಾ ಸುಂದರ್, ನಾಗೇಶ್ ಮಯ್ಯ, ಮೂಗು ಸುರೇಶ್, ಸಚಿನ್ ಪುರೋಹಿತ್, ಜಾನಿ ನಟಿಸಿದ್ದಾರೆ. ಅಲೆನ್ ಕ್ರಾಸ್ಟಾ ಸಂಗೀತ ನಿರ್ದೇಶನ, ಸೂರ್ಯಕಾಂತ್ ಛಾಯಾಗ್ರಹಣ, ಸಂಜೀವ್ ರೆಡ್ಡಿ ಸಂಕಲನ ‘ಸ್ವರಾಜ್ಯ 1942’ ಸಿನಿಮಾಗಿದೆ. ವಿವೈ ಸಿನಿಮಾಸ್ ಬ್ಯಾನರ್ ನಡಿ ಡಾ.ಪುಷ್ಪಾವತಿ ಮತ್ತು ಏ ಕಾರಜೋಳ ಶಕುಂತಲಾ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಶೂಟಿಂಗ್ ಮುಗಿಸಿರುವ ‘ಸ್ವರಾಜ್ಯ 1942’ ಆದಷ್ಟು ಬೇಗ ಪ್ರೇಕ್ಷಕರ ಮುಂದೆ ಬರಲಿದೆ.

 

ಇದನ್ನೂ ಓದಿ : ಆಯುಧ ಪೂಜೆಯಂದೇ ಯದುವಂಶಕ್ಕೆ ಸಿಹಿ ಸುದ್ದಿ – ಎರಡನೇ ಮಗುವಿಗೆ ಜನ್ಮ ನೀಡಿದ ರಾಣಿ ತ್ರಿಷಿಕಾ ಕುಮಾರಿ..!

Leave a Comment

DG Ad

RELATED LATEST NEWS

Top Headlines

ನಾನು ಮುಡಾ ಫೈಲ್​​​ಗಳನ್ನು ತಂದಿಲ್ಲ, ದೇವರ ಮುಂದೆ ಆಣೆ ಮಾಡೋಕೆ ನಾನ್​ ರೆಡಿ – ಸಚಿವ ಭೈರತಿ ಸುರೇಶ್..!

ಬೆಂಗಳೂರು : ಇಡೀ ರಾಜ್ಯದಲ್ಲೇ ದೊಡ್ಡ ಸುದ್ದಿಯಾಗಿದ್ದ ಮುಡಾ ಹಗರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಮೈಸೂರು ಮುಡಾ ಕಚೇರಿ ಮೇಲೆ ದಾಳಿ ಮಾಡಿದ್ದಾರೆ.

Live Cricket

Add Your Heading Text Here