ಬೆಂಗಳೂರು : ರಾಜ್ಯದಲ್ಲಿ ಲೋಕಸಭೆ ಚುನಾವಣೆ ಕಾವು ಜೋರಾಗುತ್ತಿದ್ದು, ರಾಜಕೀಯ ಪಕ್ಷಗಳು ಚುನಾವಣಾ ಕಾರ್ಯತಂತ್ರಗಳನ್ನು ರೂಪಿಸುತ್ತಿದೆ. ಇದೀಗ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ರಾಜ್ಯದಲ್ಲಿ ಟೆಂಪಲ್ ರನ್ ನಡೆಸಲು ಸಜ್ಜಾಗಿದ್ದಾರೆ. ರಾಜ್ಯದ 14 ಕ್ಷೇತ್ರಗಳಿಗೆ ಮೊದಲ ಹಂತದ ಚುನಾವಣೆಗೆ ಮಾರ್ಚ್ 28ರಿಂದ ಅಧಿಸೂಚನೆ ಹೊರಬೀಳಲಿದೆ. ಮೊದಲ ಹಂತಕ್ಕೆ ಅಧಿಸೂಚನೆ ಹೊರಡಿಸೋ ಮುನ್ನವೇ ಡಿಕೆಶಿ ದೇಗುಲಗಳಿಗೆ ಭೇಟಿ ನೀಡುತ್ತಿದ್ದಾರೆ.
ಡಿ.ಕೆ ಶಿವಕುಮಾರ್ ಎರಡು ದಿನಗಳ ಕಾಲ ರಾಜ್ಯದ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆಯಲಿದ್ದಾರೆ. ಇಂದು ಡಿಕೆಶಿ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ. ಮಧ್ಯಾಹ್ನ ಶೃಂಗೇರಿ ಶಾರದಾಂಬ ದೇವಸ್ಥಾನ, ಸಂಜೆ ವೇಳೆ ಕೊಲ್ಲೂರುಗೆ ತೆರಳಿ ಮೂಕಾಂಬಿಕೆ ದೇವಿಯ ದರ್ಶನ ಪಡೆಯಲಿದ್ದಾರೆ.
ಮಾರ್ಚ್ 27ರಂದು ಗೋಕರ್ಣಗೆ ತೆರಳಲಿರುವ ಡಿಕೆಶಿ, ಶ್ರೀ ಮಹಾಬಲೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಕುಮಟಾಗೆ ತೆರಳಿ ಲೋಕಸಭೆ ಚುನಾವಣೆ ಹಿನ್ನೆಲೆ ಕೈ ಕಾರ್ಯಕರ್ತರ ಜೊತೆ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ ಮೈಸೂರಿಗೆ ತೆರಳಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಲಿದ್ದಾರೆ. ಸಂಜೆ ಬೆಂಗಳೂರಿಗೆ ಮರಳಲಿದ್ದಾರೆ.
ಇದನ್ನೂ ಓದಿ : ಬಿಬಿಎಂಪಿ ಆಸ್ತಿ ತೆರಿಗೆ ದರ ಹೆಚ್ಚಳದ ಸುದ್ದಿ ಸುಳ್ಳು – ಡಿಕೆ ಶಿವಕುಮಾರ್ ಸ್ಪಷ್ಟನೆ..!