ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ನಲ್ಲಿ ನಡೆದಿದೆ. ಇದೀಗ ಹೈಕೋರ್ಟ್ ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ನೀಡಿದೆ.
ಆಗಸ್ಟ್ 29ರವರೆಗೂ ಪ್ರಾಸಿಕ್ಯೂಷನ್ ಅನುಮತಿಗೆ ತಡೆಯಾಜ್ಞೆ ನೀಡಿ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಆದೇಶ ಹೊರಡಿಸಿದ್ದಾರೆ. 10 ದಿನಗಳ ಕಾಲ ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, ಇನ್ನು ಆಗಸ್ಟ್ 29 ಮಧ್ಯಾಹ್ನ 2.30ಕ್ಕೆ ಅರ್ಜಿ ವಿಚಾರಣೆ ನಡೆಯಲಿದೆ. ಹೈಕೋರ್ಟ್ನ ಮುಂದಿನ ಆದೇಶದವರೆಗೂ ಯಾವುದೇ ಆದೇಶ ನೀಡದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಸೂಚನೆ ನೀಡಿದೆ. ನಾಳೆ ಟಿ.ಜೆ.ಅಬ್ರಹಾಂ ಖಾಸಗಿ ದೂರಿನ ಅರ್ಜಿ ವಿಚಾರಣೆ ನಡೆಯಲಿದೆ. ಅರ್ಜಿ ವಿಚಾರಣೆ ನಡೆಸಬಹುದು ಆದ್ರೆ, ಯಾವುದೇ ಆದೇಶ ನೀಡದಂತೆ ಹೈಕೋರ್ಟ್ ಸೂಚನೆ ನೀಡಿದೆ.
ನ್ಯಾಯಮೂರ್ತಿ ನಾಗಪ್ರಸನ್ನ ಅವರು ವಿಚಾರಣೆ ನಡೆಸಿದ್ದು, ವಕೀಲರ ನಡುವೆ ಸುದೀರ್ಘ ವಾದ-ಪ್ರತಿವಾದ ನಡೆದಿದೆ. ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಮಧ್ಯಂತರ ತೀರ್ಪು ನೀಡುವಂತೆ ಮನವಿ ಮಾಡಿದ್ದರು. ನ್ಯಾಯಾಧೀಶರು ಅಭಿಷೇಕ್ ಮನುಸಿಂಘ್ವಿ ಮನವಿ ಪುರಸ್ಕರಿಸಿದ್ದಾರೆ. ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ವಾದ ಮಂಡಿಸಿದರು. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ವಾದ ಮಂಡಿಸಲು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹಾಜರಾಗಿದ್ದರು.
ಇದನ್ನೂ ಓದಿ : ಸುದ್ದಿಗೋಷ್ಠಿ ನಡೆಸುತ್ತಿರುವಾಗಲೇ ಕಾಂಗ್ರೆಸ್ ಪಕ್ಷದ ಜನಪರ ಹೋರಾಟಗಾರ ರವಿಚಂದ್ರನ್ ಹೃದಯಾಘಾತದಿಂದ ಸಾವು..!