Download Our App

Follow us

Home » ರಾಜಕೀಯ » ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್​ – ಆ.29ರವರೆಗೆ ಪ್ರಾಸಿಕ್ಯೂಷನ್​ ಅನುಮತಿಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್..!

ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್​ – ಆ.29ರವರೆಗೆ ಪ್ರಾಸಿಕ್ಯೂಷನ್​ ಅನುಮತಿಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್..!

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನಡೆದಿದೆ. ಇದೀಗ ಹೈಕೋರ್ಟ್​ ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್​ ನೀಡಿದೆ.

ಆಗಸ್ಟ್​ 29ರವರೆಗೂ ಪ್ರಾಸಿಕ್ಯೂಷನ್​ ಅನುಮತಿಗೆ ತಡೆಯಾಜ್ಞೆ ನೀಡಿ ಹೈಕೋರ್ಟ್​ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಆದೇಶ ಹೊರಡಿಸಿದ್ದಾರೆ. 10 ದಿನಗಳ ಕಾಲ ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್​​ ಸಿಕ್ಕಿದ್ದು, ಇನ್ನು ಆಗಸ್ಟ್​ 29 ಮಧ್ಯಾಹ್ನ 2.30ಕ್ಕೆ ಅರ್ಜಿ ವಿಚಾರಣೆ ನಡೆಯಲಿದೆ. ಹೈಕೋರ್ಟ್​ನ​ ಮುಂದಿನ ಆದೇಶದವರೆಗೂ ಯಾವುದೇ ಆದೇಶ ನೀಡದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಸೂಚನೆ ನೀಡಿದೆ. ನಾಳೆ ಟಿ.ಜೆ.ಅಬ್ರಹಾಂ ಖಾಸಗಿ ದೂರಿನ ಅರ್ಜಿ ವಿಚಾರಣೆ ನಡೆಯಲಿದೆ. ಅರ್ಜಿ ವಿಚಾರಣೆ ನಡೆಸಬಹುದು ಆದ್ರೆ, ಯಾವುದೇ ಆದೇಶ ನೀಡದಂತೆ ಹೈಕೋರ್ಟ್​ ಸೂಚನೆ ನೀಡಿದೆ.

ನ್ಯಾಯಮೂರ್ತಿ ನಾಗಪ್ರಸನ್ನ ಅವರು ವಿಚಾರಣೆ ನಡೆಸಿದ್ದು, ವಕೀಲರ ನಡುವೆ ಸುದೀರ್ಘ ವಾದ-ಪ್ರತಿವಾದ ನಡೆದಿದೆ. ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್​ ಮನು ಸಿಂಘ್ವಿ ಮಧ್ಯಂತರ ತೀರ್ಪು ನೀಡುವಂತೆ ಮನವಿ ಮಾಡಿದ್ದರು. ನ್ಯಾಯಾಧೀಶರು ಅಭಿಷೇಕ್​ ಮನುಸಿಂಘ್ವಿ ಮನವಿ ಪುರಸ್ಕರಿಸಿದ್ದಾರೆ. ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ವಾದ ಮಂಡಿಸಿದರು. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ವಾದ ಮಂಡಿಸಲು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹಾಜರಾಗಿದ್ದರು.

ಇದನ್ನೂ ಓದಿ : ಸುದ್ದಿಗೋಷ್ಠಿ ನಡೆಸುತ್ತಿರುವಾಗಲೇ ಕಾಂಗ್ರೆಸ್​ ಪಕ್ಷದ ಜನಪರ ಹೋರಾಟಗಾರ ರವಿಚಂದ್ರನ್​ ಹೃದಯಾಘಾತದಿಂದ ಸಾವು..!

Leave a Comment

DG Ad

RELATED LATEST NEWS

Top Headlines

ಶಾಲಾ ಮಕ್ಕಳ ಕ್ಷೀರ ಭಾಗ್ಯಕ್ಕೆ ಕನ್ನ ಹಾಕಿದ ಹೆಡ್​​ ಮಾಸ್ಟರ್ – ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು..!

ಗುಲ್ಬರ್ಗ : ಅಕ್ಷರ ದಾಸೋಹ ಯೋಜನೆಯ ಕ್ಷೀರ ಭಾಗ್ಯಕ್ಕೆ ಹೆಡ್​​ ಮಾಸ್ಟರರೇ ಕನ್ನ ಹಾಕಿರುವ ಘಟನೆಯೊಂದು ನಡೆದಿದೆ. ಗುಲ್ಬರ್ಗದ ಅಫಜಲಪುರ ತಾಲ್ಲೂಕಿನ ಸ್ಟೇಷನ್ ಗಾಣಗಾಪುರ ಗ್ರಾಮದ ಸರ್ಕಾರಿ

Live Cricket

Add Your Heading Text Here