Download Our App

Follow us

Home » ಜಿಲ್ಲೆ » ವಿಜಯನಗರ : ನಿಶ್ಚಿತಾರ್ಥ ಮುಗಿಸಿ ವಾಪಸ್ ಆಗುತ್ತಿದ್ದಾಗ ಭೀಕರ ಅಪಘಾತ – ಓರ್ವ ಸಾವು, 10 ಮಂದಿಗೆ ಗಾಯ..!

ವಿಜಯನಗರ : ನಿಶ್ಚಿತಾರ್ಥ ಮುಗಿಸಿ ವಾಪಸ್ ಆಗುತ್ತಿದ್ದಾಗ ಭೀಕರ ಅಪಘಾತ – ಓರ್ವ ಸಾವು, 10 ಮಂದಿಗೆ ಗಾಯ..!

ವಿಜಯನಗರ : ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿ 10 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುಲಿಕೆರೆ ಕ್ರಾಸ್​ನ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.

ಕೃಷ್ಣಪ್ಪ (62) ಮೃತ ದುರ್ದೈವಿ. ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಟಿಟಿ ವಾಹನ ಡಿಕ್ಕಿಯಾಗಿ ಅನಾಹುತ ಸಂಭವಿಸಿದೆ. ಕಲುಬುರಗಿಯಲ್ಲಿ ನಿಶ್ಚಿತಾರ್ಥ ಮುಗಿಸಿಕೊಂಡು ಚಿಕ್ಕಬಳ್ಳಾಪುರದ ಆರೋಡಿ ಗ್ರಾಮಕ್ಕೆ ತೆರಳುತ್ತಿದ್ದರು. ಟಿಟಿ ವಾಹನದಲ್ಲಿ ಇಬ್ಬರು ಮಕ್ಕಳು ಸೇರಿದಂತೆ 16 ಮಂದಿ ಪ್ರಯಾಣಿಕರಿದ್ದರು.

ಗಂಗಾವತಿಯಿಂದ ಮೈಸೂರಿಗೆ ತೆರಳುತ್ತಿದ್ದ ಲಾರಿ ಕೆಟ್ಟು ನಿಂತಿತ್ತು. ಡಿಕ್ಕಿ ರಭಸಕ್ಕೆ ಟಿಟಿ ವಾಹನ ನುಜ್ಜು-ಗುಜ್ಜಾಗಿದೆ, ಇಬ್ಬರು ಸಿಲುಕಿಕೊಂಡಿದ್ದರು. ಅವರನ್ನು ಹೊರ ತೆಗೆಯಲು ಹರಸಾಹಸ ಪಡಬೇಕಾಯಿತು. ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಬೆಂಗಳೂರಿನಲ್ಲಿ ಡೆಂಘೀ ನಿಯಂತ್ರಣಕ್ಕೆ ಹರಸಾಹಸ : ಮನೆ-ಮನೆ ಸಮೀಕ್ಷೆಗೆ ಮುಂದಾದ BBMP ಕಮಿಷನರ್​​​..!

Leave a Comment

DG Ad

RELATED LATEST NEWS

Top Headlines

MLA ಮುನಿರತ್ನ ವಿರುದ್ಧ ರೇಪ್ ಆರೋಪದ ಬೆನ್ನಲ್ಲೇ ಮಾಜಿ ಕಾರ್ಪೊರೇಟರ್ ಪತಿಯ ಹನಿಟ್ರ್ಯಾಪ್ ವಿಡಿಯೋ ವೈರಲ್..!

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ಸೇರಿ ಏಳು ಮಂದಿಯ ವಿರುದ್ಧ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ

Live Cricket

Add Your Heading Text Here