Download Our App

Follow us

Home » ರಾಜ್ಯ » ಕೇರಳದಲ್ಲಿ ಭೀಕರ ಅಪಘಾತ.. ಐವರು MBBS ವಿದ್ಯಾರ್ಥಿಗಳ ದುರ್ಮರಣ..!

ಕೇರಳದಲ್ಲಿ ಭೀಕರ ಅಪಘಾತ.. ಐವರು MBBS ವಿದ್ಯಾರ್ಥಿಗಳ ದುರ್ಮರಣ..!

ಕೇರಳ : ಕೇರಳದ ಅಲಪ್ಪುಳದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ದೇವಾನಂದನ್, ಮುಹಮ್ಮದ್ ಇಬ್ರಾಹಿಂ, ಆಯುಷ್ ಶಾಜಿ, ಶ್ರೀದೀಪ್ ವಲ್ಸನ್ ಮತ್ತು ಮುಹಮ್ಮದ್ ಜಬ್ಬಾರ್ ಮೃತ ದುರ್ದೈವಿಗಳು.

ಮೃತರು ಸರ್ಕಾರಿ ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿಗಳಾಗಿದ್ದಾರೆ ಎಂದು ತಿಳಿದುಬಂದಿದೆ. ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಒಟ್ಟು ಏಳು ಮಂದಿ ಇದ್ದರು. ಈ ಪೈಕಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ವಾಹನ ಒಡೆದು ಒಳಗಿದ್ದ ಯುವಕರನ್ನು ಹೊರ ತೆಗೆಯಲಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದ ಬಳಿಕ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ : ಹಸೆಮಣೆ ಏರಲು ಸಜ್ಜಾದ ಬ್ಯಾಡ್ಮಿಂಟನ್​ ತಾರೆ ಪಿವಿ ಸಿಂಧು.. ವರ ಯಾರು? ಮದುವೆ ಯಾವಾಗ?

Leave a Comment

DG Ad

RELATED LATEST NEWS

Top Headlines

ರೋಮ್ಯಾನ್ಸ್ ಸೀನ್​ ಶೂಟಿಂಗ್ ಮಾಡುವಾಗ ಕಂಟ್ರೋಲ್ ತಪ್ಪಿದ್ರಾ ವರುಣ್ ಧವನ್ ? – ನಟಿ ಜೊತೆಗಿನ ಹಾಟ್​ ವಿಡಿಯೋ ಲೀಕ್​!

ಮುಂಬೈ : ಬಾಲಿವುಡ್​ನಲ್ಲಿ ಯಂಗ್ ಹೀರೋ ಆಗಿ ಗುರುತಿಸಿಕೊಂಡಿರುವ ನಟ ವರುಣ್ ಧವನ್ ಸಿನಿಮಾದ ರೋಮ್ಯಾನ್ಸ್ ಸೀನ್​ ಶೂಟಿಂಗ್ ವೇಳೆ ಕಂಟ್ರೋಲ್ ತಪ್ಪಿದ್ರಾ ಎಂಬ ಚರ್ಚೆಗಳು ಶುರುವಾಗಿವೆ. ನಟ

Live Cricket

Add Your Heading Text Here