Download Our App

Follow us

Home » ರಾಜ್ಯ » ರಾಜಸ್ಥಾನದಲ್ಲಿ ಆಟೋ-ಬಸ್​ ನಡುವೆ ಭೀಕರ ಅಪಘಾತ.. 12ಕ್ಕೂ ಹೆಚ್ಚು ಮಂದಿ ಸಾವು..!

ರಾಜಸ್ಥಾನದಲ್ಲಿ ಆಟೋ-ಬಸ್​ ನಡುವೆ ಭೀಕರ ಅಪಘಾತ.. 12ಕ್ಕೂ ಹೆಚ್ಚು ಮಂದಿ ಸಾವು..!

ರಾಜಸ್ಥಾನದ ಧೋಲ್ಪುರದಲ್ಲಿ ಭಾರಿ ಅಪಘಾತ ಸಂಭವಿಸಿದೆ. ಕರೌಲಿ-ಧೋಲ್ಪುರ್ ಹೆದ್ದಾರಿ NH-11B ಯ ಸುನಿಪುರ್ ಗ್ರಾಮದ ಬಳಿ ನಿನ್ನೆ ರಾತ್ರಿ ಆಟೋ ರಿಕ್ಷಾ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ 12ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮೃತರಲ್ಲಿ ಐವರು ಮಕ್ಕಳು, ಮೂವರು ಬಾಲಕಿಯರು, ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸೇರಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ, ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮಾಹಿತಿ ಪ್ರಕಾರ ಆಟೋ ಸವಾರ ಬರಿ ನಗರದ ಗುಮತ್ ಮೊಹಲ್ಲಾ ನಿವಾಸಿ. ಬರೌಲಿ ಗ್ರಾಮದಲ್ಲಿ ಭಾತ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲರೂ ಹಿಂತಿರುಗುತ್ತಿದ್ದರು. ಅಷ್ಟರಲ್ಲಿ ಈ ಅವಘಡ ಸಂಭವಿಸಿದೆ. ರಾತ್ರಿ 11 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.

ಅಪಘಾತದ ನಂತರ ಗುಮತ್ ಪ್ರದೇಶದಲ್ಲಿ ಶೋಕ ಮಡುಗಟ್ಟಿದೆ. ಮೃತರ ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ. ಈ ಹೃದಯವಿದ್ರಾವಕ ಘಟನೆ ಇಡೀ ಪ್ರದೇಶವನ್ನು ಬೆಚ್ಚಿ ಬೀಳಿಸಿದೆ.

ಇದನ್ನೂ ಓದಿ : ದಳಪತಿಗಳಿಗೆ ಬಿಸಿ ತುಪ್ಪವಾದ ಚನ್ನಪಟ್ಟಣ – ದೇವೇಗೌಡರ ಭೇಟಿಗೆ ಮುಂದಾದ ಹೆಚ್​ಡಿಕೆ..!

Leave a Comment

DG Ad

RELATED LATEST NEWS

Top Headlines

BWSSB ನಿರ್ಲಕ್ಷ್ಯಕ್ಕೆ ನಿವಾಸಿಗಳ ಪರದಾಟ – ಜಲಮಂಡಳಿ ಬೇಜವಾಬ್ದಾರಿತನಕ್ಕೆ ಸ್ಥಳೀಯರ ಆಕ್ರೋಶ..!

ಬೆಂಗಳೂರು : ಕಾವೇರಿ ಪೈಪ್ ಲೈನ್ ಒಡೆದು ಮನೆಯೊಳಗೆ ನುಗ್ಗಿದ ನೀರು ಘಟನೆ ಬನಶಂಕರಿ 5ನೇ ಅಂತ ವಸಂತಪುರದಲ್ಲಿ ನಡೆದಿದೆ. BWSSB ನಿರ್ಲಕ್ಷ್ಯದಿಂದ ನಿವಾಸಿಗಳು ಪರದಾಡುವಂತಹ ಸ್ಥಿತಿ

Live Cricket

Add Your Heading Text Here