ಬೆಳಗಾವಿ : ಖಾನಾಪುರ ತಾಲೂಕಿನ ಬೀಡಿ ಗ್ರಾಮದ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸ್ವಿಫ್ಟ್ ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದು, 6 ಮಂದಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.
ಮದುವೆ ಮುಗಿಸಿ ಮರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಮಹಾರಾಷ್ಟ್ರ ಮೂಲದ ಕಾರು ಇದಾಗಿದ್ದು ಮೃತರ ಗುರುತು ಪತ್ತೆಯಾಗಿಲ್ಲ.
ಒಂದೇ ಕಾರಿನಲ್ಲಿ ಒಂಬತ್ತು ಜನ ಪ್ರಯಾಣಿಸುತ್ತಿದ್ದರು. ಮದುವೆ ಮುಗಿಸಿ ವಾಪಸ್ ತೆರಳುವಾಗ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಗಿದೆ. ಸ್ಥಳಕ್ಕೆ ಎಸ್ಪಿ ಭೀಮಾಶಂಕರ ಗುಳೇದ್ ಅವರು ದೌಡಾಯಿಸಿದ್ದು, ನಂದಗಡ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಯುವ ರಾಜ್‌ಕುಮಾರ್ ಅಭಿನಯದ ʻಯುವʼ ಸಿನಿಮಾದ ಆಡಿಯೋ ಹಕ್ಕು ಅಧಿಕ ಮೊತ್ತಕ್ಕೆ ಸೇಲ್..!
Post Views: 345