Download Our App

Follow us

Home » ಮೆಟ್ರೋ » ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಭೀಕರ ಅಪಘಾತ – ಆಂಬುಲೆನ್ಸ್‌ಗೆ ದಾರಿ ಬಿಡಲು ಹೋಗಿ ಪಲ್ಟಿಯಾದ ಕಾರು..!

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಭೀಕರ ಅಪಘಾತ – ಆಂಬುಲೆನ್ಸ್‌ಗೆ ದಾರಿ ಬಿಡಲು ಹೋಗಿ ಪಲ್ಟಿಯಾದ ಕಾರು..!

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಅತ್ಯಂತ ಉದ್ದನೆಯ ಫ್ಲೈ ಓವರ್ ಎಂಬ ಖ್ಯಾತಿಯನ್ನು ಪಡೆದಿರುವ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಒವರ್‌ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಹಿಂದೆ ವೇಗವಾಗಿ ಬರುತ್ತಿದ್ದ ಆಂಬುಲೆನ್ಸ್‌ಗೆ ದಾರಿ ಬಿಡಲು ಹೋಗಿ ಕಾರು ಡಿವೈಡರ್‌ಗೆ ಗುದ್ದಿ ಪಲ್ಟಿಯಾಗಿರುವ ದುರ್ಘಟನೆ ಜರುಗಿದೆ.

ಆಂಬ್ಯುಲೆನ್ಸ್​​ಗೆ ದಾರಿ ಬಿಡಲು ಹೋಗಿ ಕಾರು ಪಲ್ಟಿಯಾಗಿದ್ದು, ಈ ಕುರಿತ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ನು ಈ ವಿಡಿಯೋ ನೋಡಿದರೆ ಎಂಥವರೂ ಬೆಚ್ಚಿ ಬೀಳ್ತಾರೆ. ಸ್ವಲ್ಪ ಯಾಮಾರಿದ್ದರೂ ಕಾರು ಪ್ಲೈಓವರ್ ಮೇಲಿಂದ ಕೆಳಗೆ ಬಿದ್ದು, ಕಾರಿನಲ್ಲಿದ್ದವರ ಪ್ರಾಣವೇ ಹೋಗುತ್ತಿತ್ತು.

ಸೋಮವಾರ ಸಂಜೆ 5.30ರ  ಸುಮಾರಿಗೆ ಈ ಘಟನೆ ನಡೆದಿದ್ದು, ಅಪಘಾತದಲ್ಲಿ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ.  ಕಾರಿನ ಪಕ್ಕದಲ್ಲಿ ಹೋಗುತ್ತಿದ್ದ ಇ-ಸೈಕಲ್‌ಗೂ ಡಿಕ್ಕಿ ಹೊಡೆದಿದೆ. ಆ್ಯಂಬುಲೆನ್ಸ್ ಪಕ್ಕದಲ್ಲಿದ್ದ ಇನ್ನೊಂದು ಕಾರಿಗೂ ಡಿಕ್ಕಿಯಾಗಿದೆ. ಆದರೆ, ಯಾರಿಗೂ ಏನೂ ಆಗಿಲ್ಲ. ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕೂಡಲೇ ಅವರನ್ನು ಬೇರೊಂದು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ. ಮುಂದೆ ಹೋಗುತ್ತಿದ್ದ ಕಾರಿನ‌ ಡ್ಯಾಶ್ ಬೋರ್ಡ್ ಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದೆ.

ಇದನ್ನೂ ಓದಿ : ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ‘ವೆಟ್ಟೈಯನ್’ ಅಕ್ಟೋಬರ್ 10ಕ್ಕೆ ತೆರೆಗೆ..!

Leave a Comment

DG Ad

RELATED LATEST NEWS

Top Headlines

ವಿಕ್ಕಿ ಯಾವಾಗಲೂ ಹೇಗಿರ್ತಾರೆ ಗೊತ್ತಾ? – ದಾಂಪತ್ಯದ ಸೀಕ್ರೆಟ್ ರಿವೀಲ್ ಮಾಡಿದ ಕತ್ರಿನಾ ಕೈಫ್..!

ಮುಂಬೈ : ಬಾಲಿವುಡ್​ನ​ ಕ್ಯೂಟ್​ ಕಪಲ್​ಗಳಲ್ಲಿ ಕತ್ರಿನಾ ಕೈಫ್​​ ಮತ್ತು ವಿಕ್ಕಿ ಕೌಶಲ್​ ಕೂಡ ಒಬ್ಬರು. 2021ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ ಮುದ್ದಾದ ಜೋಡಿಯನ್ನು ಬಿಗ್

Live Cricket

Add Your Heading Text Here