Download Our App

Follow us

Home » ಜಿಲ್ಲೆ » ಹುಬ್ಬಳ್ಳಿಯಲ್ಲಿ ಟಾಟಾ ಏಸ್-ಟ್ರಕ್ ನಡುವೆ ಭೀಕರ ಅಪಘಾತ : ಓರ್ವ ಮಹಿಳೆ ಸಾವು, 8 ಮಂದಿಗೆ ಗಂಭೀರ ಗಾಯ..!

ಹುಬ್ಬಳ್ಳಿಯಲ್ಲಿ ಟಾಟಾ ಏಸ್-ಟ್ರಕ್ ನಡುವೆ ಭೀಕರ ಅಪಘಾತ : ಓರ್ವ ಮಹಿಳೆ ಸಾವು, 8 ಮಂದಿಗೆ ಗಂಭೀರ ಗಾಯ..!

ಹುಬ್ಬಳ್ಳಿ : ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 8 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡ ಜಿಲ್ಲೆ ಕಲಘಟಗಿಯ ತಡಸ ಕ್ರಾಸ್ ಬಳಿ ಬುಧವಾರ ಬೆಳಗ್ಗೆ ನಡೆದಿದೆ. ಬಸಮ್ಮ(38) ಅಪಘಾತದಲ್ಲಿ ಮೃತಪಟ್ಟ ಮಹಿಳೆ.

ಟಾಟಾ ಏಸ್ ವಾಹನಕ್ಕೆ ಟ್ರಕ್​ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಟಾಟಾ ಏಸ್​​ನಲ್ಲಿದ್ದ ಮಹಿಳೆಯರು ಕೂಲಿ ಕೆಲಸಕ್ಕೆಂದು ತಾರಿಹಾಳ ಕೈಗಾರಿಕಾ ಪ್ರದೇಶಕ್ಕೆ ತೆರಳುತ್ತಿದ್ದರು ಎನ್ನಲಾಗಿದ್ದು,  ತಡಸ ಕ್ರಾಸ್ ಬಳಿ ವೇಗವಾಗಿ ಬಂದ ಟ್ರಕ್ ಟಾಟಾ ಏಸ್‌ಗೆ ಡಿಕ್ಕಿಯಾಗಿದೆ. ಕಲಘಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಗಾಯಾಳುಗಳು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ.

ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಟ್ರಕ್ ಡ್ರೈವರ್​ನನ್ನು ವಶಕ್ಕೆ ಪಡೆದಿದ್ದಾರೆ. ಮೃತ ಬಸಮ್ಮ ಮತ್ತು ಗಾಯಾಳುಗಳು ಕಲಘಟಗಿ ತಾಲ್ಲೂಕಿನ ಜಿನ್ನೂರು ಗ್ರಾಮದವರು ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಕ್ರಿಕೆಟ್ ಜಗತ್ತಿಗೆ ಜಯ್ ಶಾ ಸಾರಥಿ – ಐಸಿಸಿ ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here