ಬೆಂಗಳೂರು : ಲಾರಿ ಡಿಕ್ಕಿಯಾಗಿ ಸ್ಕೂಟರ್ ಹಿಂಬದಿ ಕುಳಿತಿದ್ದ 7 ತಿಂಗಳ ತುಂಬು ಗರ್ಭಿಣಿ ಮಹಿಳೆ ಮೃತಪಟ್ಟ ದಾರುಣ ಘಟನೆ ನೆಲಮಂಗಲದ ಎಡೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಎಡೇಹಳ್ಳಿಯ ಸಿಂಚನಾ (30) ಮೃತ ದುರ್ದೈವಿ. ಅಪಘಾತದಲ್ಲಿ ಸಿಂಚನಾ ಪತಿ ಮಂಜುನಾಥ್ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ.
ದೇವಸ್ಥಾನದಲ್ಲಿ ಪೂಜೆ ಮುಗಿಸಿಕೊಂಡು ಮನೆಗೆ ತೆರಳುವಾಗ ಈ ದುರ್ಘಟನೆ ಸಂಭವಿಸಿದ್ದು, ವೇಗವಾಗಿ ಬಂದ ಜಲ್ಲಿ ತುಂಬಿದ್ದ ಲಾರಿ ಹಿಂಬದಿಯಿಂದ ಸ್ಕೂಟರ್ಗೆ ಡಿಕ್ಕಿ ಹೊಡೆದಿದೆ. ಆಗ ಸಿಂಚನಾ ಸ್ಕೂಟರ್ನಿಂದ ಕೆಳೆಗೆ ಬಿದ್ದಿದ್ದಾರೆ. ಈ ವೇಳೆ ಲಾರಿ ಸಿಂಚನಾ ಮೇಲೆ ಹರಿದಿದೆ. ಪರಿಣಾಮ ನಡು ರಸ್ತೆಯಲ್ಲೇ ಸಿಂಚನಾ ಮೃತಪಟ್ಟಿದ್ದಾರೆ. ಈ ಮನಕಲಕುವ ಘಟನೆ ಕಂಡು ಸ್ಥಳೀಯರು ಕೂಡ ಕಣ್ಣೀರು ಹಾಕಿದ್ದಾರೆ.
ಮೃತ ದೇಹದ ಮುಂದೆ ಪತಿ ಮಂಜುನಾಥ್ ಹಾಗೂ ಅತ್ತೆಯ ಆಕ್ರಂದನ ಮುಗಿಲು ಮುಟ್ಟಿದೆ. ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸಾರ್ವಜನಿಕ ಅಸ್ಪತ್ರೆಗೆ ಮೃತದೇಹದ ರವಾನೆ ಮಾಡಲಾಗಿದೆ. ನೆಲಮಂಗಲ ಸಂಚಾರಿ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ : ಶಿರೂರು ಗುಡ್ಡ ಕುಸಿತದ ಬೆನ್ನಲ್ಲೇ ಕಾರವಾರದ ಕಾಳಿ ಸೇತುವೆ ಕುಸಿತ – ನದಿಗೆ ಬಿದ್ದ ಟ್ರಕ್, ಅದೃಷ್ಟವಶಾತ್ ಚಾಲಕ ಪಾರು…!