Download Our App

Follow us

Home » ಜಿಲ್ಲೆ » ತುಮಕೂರಿನಲ್ಲಿ ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ – ಐವರು ದಾರುಣ ಸಾವು..!

ತುಮಕೂರಿನಲ್ಲಿ ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ – ಐವರು ದಾರುಣ ಸಾವು..!

ತುಮಕೂರು : ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಐವರು ಸಾವನ್ನಪ್ಪಿರೋ ಭಯಾನಕ ಘಟನೆ ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಕಾಟಗಾನಹಟ್ಟಿಯ ಬಳಿ ನಡೆದಿದೆ. ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಓರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಪ್ರಾಣ ಬಿಟ್ಟಿದ್ದಾರೆ. ಮೃತದೇಹಗಳನ್ನು ಮಧುಗಿರಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಪಾವಗಡದ ಎತ್ತಿನಹಳ್ಳಿಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಹಾಗೂ ತುಮಕೂರಿನಿಂದ ಬರುತ್ತಿದ್ದ ಮತ್ತೊಂದು ಕಾರಿನ ನಡುವೆ ಪರಸ್ಪರ ಡಿಕ್ಕಿಯಾಗಿದ್ದು, ಒರ್ವ ಮಹಿಳೆ ಸೇರಿದಂತೆ 3 ಪುರುಷರು ಸೇರಿ ಒಟ್ಟು 4 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, 8 ವರ್ಷದ ಗಂಡು ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದೆ.

ತುಮಕೂರು ಮಾರ್ಗವಾಗಿ ಬರುತ್ತಿದ್ದ ಕಾರಿನಲ್ಲಿದ್ದ ಚಾಲಕ ಮಿಡಿಗೇಶಿ, ಕಾರೇನಹಳ್ಳಿಯ ವಾಸಿ ನಾಗರಾಜು ಇಬ್ಬರು ಸಹ ಮೃತಪಟ್ಟಿದ್ದು, ಇಬ್ಬರ ವಿಳಾಸ ಪತ್ತೆಯಾಗಿಲ್ಲ.
ಇನ್ನು ಐವರಲ್ಲಿ ಸಿಂಧೂ ಎಂಬ ಮಹಿಳೆಯ ಗುರುತು ಪತ್ತೆಯಾಗಿದೆ. ಮಹಿಳೆ ಗೀತಾ ಮತ್ತು ಮತ್ತೊಬ್ಬ ಬಾಲಕನ ಸ್ಥಿತಿ ಗಂಭೀರವಾಗಿದೆ. ಸಿಂಧೂ ಎಂಬುವವರ 1 ವರ್ಷ ಮಗುವಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಸ್ಥಳಕ್ಕೆ ಮಧುಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೀಡಾದ ಕಾರುಗಳನ್ನ ಸ್ಥಳದಿಂದ ತೆರವುಗೊಳಿಸಿ, ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ಇದನ್ನೂ ಓದಿ : ಸರ್ಕಾರಿ ಆಸ್ಪತ್ರೆಗಳಲ್ಲಿ ಸಿನಿಮಾ ಶೂಟಿಂಗ್ ನಿಷೇಧಿಸಿ – ಕೇರಳ ಸರ್ಕಾರಕ್ಕೆ ಮಾನವ ಹಕ್ಕುಗಳ ಆಯೋಗ ಸೂಚನೆ..!

Leave a Comment

DG Ad

RELATED LATEST NEWS

Top Headlines

ವಿಕ್ಕಿ ಯಾವಾಗಲೂ ಹೇಗಿರ್ತಾರೆ ಗೊತ್ತಾ? – ದಾಂಪತ್ಯದ ಸೀಕ್ರೆಟ್ ರಿವೀಲ್ ಮಾಡಿದ ಕತ್ರಿನಾ ಕೈಫ್..!

ಮುಂಬೈ : ಬಾಲಿವುಡ್​ನ​ ಕ್ಯೂಟ್​ ಕಪಲ್​ಗಳಲ್ಲಿ ಕತ್ರಿನಾ ಕೈಫ್​​ ಮತ್ತು ವಿಕ್ಕಿ ಕೌಶಲ್​ ಕೂಡ ಒಬ್ಬರು. 2021ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ ಮುದ್ದಾದ ಜೋಡಿಯನ್ನು ಬಿಗ್

Live Cricket

Add Your Heading Text Here