ಥೈಲ್ಯಾಂಡ್ನಲ್ಲಿ 44 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಶಾಲಾ ಬಸ್‌ಗೆ ಬೆಂಕಿ ತಗುಲಿದ ಪರಿಣಾಮ 25 ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆಯಲ್ಲಿ 16 ವಿದ್ಯಾರ್ಥಿಗಳು ಮತ್ತು ಮೂವರು ಶಿಕ್ಷಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದುಯಾಗಿದೆ.
ಸ್ಥಳೀಯ ಕಾಲಮಾನ ಮಧ್ಯಾಹ್ನ 12.30ರ ಸುಮಾರಿಗೆ ಥೈಲ್ಯಾಂಡ್ನ ರಂಗ್‌ಸಿಟ್ ಶಾಪಿಂಗ್ ಮಾಲ್ ಬಳಿಯ ಫಾಹೋನ್ ಯೋಥಿನ್ ರಸ್ತೆಯಲ್ಲಿ ಅವಘಡ ಸಂಭವಿಸಿದೆ. ಗಾಯಾಳುಗಳು ಮತ್ತು ಮೃತರ ಸಂಖ್ಯೆಯನ್ನು ತಕ್ಷಣಕ್ಕೆ ಖಚಿತಪಡಿಸಲು ಸಾಧ್ಯವಾಗುತ್ತಿಲ್ಲ. ಮೂಲಗಳ ಪ್ರಕಾರ 25 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಆಂತರಿಕ ಸಚಿವ ಅನುತಿನ್ ಚಾರ್ನ್ವಿರಾಕುಲ್ ತಿಳಿಸಿದ್ದಾರೆ.
ಇನ್ನು ಬಸ್‌ಗೆ ಬೆಂಕಿ ತಗುಲಿದ ಪರಿಣಾಮ ಘಟನಾ ಸ್ಥಳದಲ್ಲಿ ದಟ್ಟವಾದ ಹೊಗೆ ಆವರಿಸಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸುತ್ತಿರುವ ಫೋಟೊ ಮತ್ತು ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ಘಟನೆ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಸಂಬಂಧ ಥೈಲ್ಯಾಂಡ್ ಪ್ರಧಾನಿ ಸಂತಾಪ ಸೂಚಿಸಿದ್ದಾರೆ. ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಅಯ್ಯೋ.. ಇದೆಂಥಾ ಕಾಲ ಬಂತು ನೋಡಿ – ಬಿಯರ್‌ಗೋಸ್ಕರ ಹೆತ್ತ ಮಗುವನ್ನೇ ಮಾರಿದ ದಂಪತಿ..!