ಮೈಸೂರು : ಮುಡಾ ಹಗರಣ ಸಂಬಂಧ ರಾಜ್ಯಪಾಲರು ಶೋಕಾಸ್ ನೀಡಿರುವ ವಿಚಾರವಾಗಿ ಆಕ್ರೋಶ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಇದಕ್ಕೆಲ್ಲ ನಾನು ಹೆದರೋದಿಲ್ಲ. ಇದನ್ನೆಲ್ಲ ಎದುರಿಸಲು ಸಿದ್ಧರಾಗಿದ್ದೇವೆ. ತಪ್ಪು ಮಾಡಿದ್ದರೆ ತಾನೇ ಹೆದರುವುದು. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯಪಾಲರು ಜೆಡಿಎಸ್, ಬಿಜೆಪಿ ಕೈಗೊಂಬೆಯಾಗಿ ವರ್ತಿಸಿದ್ದಾರೆ. 136 ಶಾಸಕರ ಬೆಂಬಲದಿಂದ ಮುಖ್ಯಮಂತ್ರಿ ಆಗಿರುವವನು ನಾನು. ನನ್ನ ಪಾತ್ರ ಇಲ್ಲದಿದ್ದರೂ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸಿದ್ದಾರೆ.
ರಾಜ್ಯಪಾಲರಿಗೆ ಸಲಹೆ ನೀಡುವವರು ಯಾರು? ರಾಜಭವನ ಹಾಗೂ ರಾಜ್ಯಪಾಲರ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ರಾಜ್ಯಪಾಲರ ನೋಟಿಸ್ಗೆ ನಾನೇಕೆ ಹೆದರಲಿ. ಅಶೋಕ್, ವಿಜಯೇಂದ್ರ ಹೆದರಿರಬೇಕು, ಅವರಿಗೆ ಭಯ ನನಗಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಟಿಜೆ ಅಹ್ರಾಂ ಒಬ್ಬ ಬ್ಲ್ಯಾಕ್ಮೇಲರ್. ಜುಲೈ 26 ಕ್ಕೆ ಬೆಳಿಗ್ಗೆ 11:30 ಕ್ಕೆ ಆತ ದೂರು ಕೊಡುತ್ತಾನೆ. ಆ ದೂರಿನ ಪರಾಮರ್ಶೆ ಮಾಡದೇ ಆ ದಿನ ಸಂಜೆಯೇ ಶೋಕಾಸ್ ನೋಟಿಸ್ ರೆಡಿ ಇದೆ ಬಂದು ಪಡೆದುಕೊಳ್ಳಿ ಎಂದು ನಮ್ಮ ಅಧಿಕಾರಿ ಎಲ್ಕೆ ಅತೀಕ್ಗೆ ಹೇಳುತ್ತಾರೆ. ಜೊಲ್ಲೆ, ಮುರುಗೇಶ್ ನಿರಾಣಿ, ಜರ್ನಾರ್ಧನ ರೆಡ್ಡಿ ವಿರುದ್ಧದ ದೂರು ಇನ್ನೂ ಹಾಗೆಯೇ ಇವೆ. ಅವರಿಗೆ ಶೋಕಾಸ್ ನೋಟಿಸ್ ಕೊಟ್ಟಿಲ್ಲ. ನನಗೆ ಯಾಕೆ ತರಾತುರಿಯಲ್ಲಿ ನೋಟಿಸ್ ಕೊಟ್ಟಿದ್ದಾರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ : ಕಾಪಿರೈಟ್ ಉಲ್ಲಂಘನೆ ಆರೋಪ – ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದ ನಟ ರಕ್ಷಿತ್ ಶೆಟ್ಟಿ..!