ಬೆಂಗಳೂರು : ಸಿಟಿಯಲ್ಲಿ ಕಳ್ಳತನಮಾಡಿ ಕಾಡನ್ನೇ ವಾಸಸ್ಥಾನ ಮಾಡಿಕೊಂಡು ಪೊಲೀಸರಿಗೆ ಸುಳಿವು ಸಿಗದಂತೆ ಕಣ್ಮರೆಯಾಗುತ್ತಿದ್ದ ಖತರ್ನಾಕ್ ಕಳ್ಳನನ್ನು ಗಿರಿನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ನರಸಿಂಹ ರೆಡ್ಡಿ ಬಂಧಿತ ಆರೋಪಿಯಾಗಿದ್ದು, ಈತ ಒಂಟಿ ಮನೆಗಳು, ಬೀಗ ಹಾಕಿದ ಮನೆಗಳಲ್ಲಿ ಯಾರು ಇಲ್ಲದ ವೇಳೆ ಕಳ್ಳತನ ಮಾಡುತ್ತಿದ್ದ. ಇತ್ತೀಚಿಗೆ ಗಿರಿನಗರ ವ್ಯಾಪ್ತಿಯ ಮನೆ ಕಳ್ಳತನ ಮಾಡಿ ಸಿಕ್ಕಿಬಿದ್ದ. ಕದ್ದ ಆಭರಣ ಸಮೇತ ಕಾಡಿಗೆ ಎಸ್ಕೇಪ್ ಆಗಿದ್ದ. ಆರೋಪಿ ಎರಡು ಕಾಡುಗಳನ್ನು ತನ್ನ ಆವಾಸಸ್ಥಾನ ಮಾಡಿಕೊಂಡಿದ್ದ. ಈತ ನೆಲಮಂಗಲ ಬಳಿಯ ಗುಡೇಮಾರನಹಳ್ಳಿ ಹಾಗೂ ಕೃಷ್ಣಗಿರಿಯ ಫಾರೆಸ್ಟ್ನಲ್ಲಿ ವಾಸ ಮಾಡುತ್ತಿದ್ದ. ಕಾಡಿನ ಬಂಡೆಗಳ ಮೇಲೆ ಮಲಗುತ್ತಿದ್ದ.
ಪೊಲೀಸರು ಬೆನ್ನತ್ತಿದರೆ ಚಾಲೆಂಜ್ ಮಾಡಿ ಓಡ್ತಿದ್ದ. ಗುಡೇಮಾರನಹಳ್ಳಿ ಕಾಡಿನಲ್ಲಿದ್ದ ವೇಳೆ ಆರೋಪಿಯನ್ನು ಗಿರಿನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಾಗಡಿಯ ಸೋಲೂರು ಮೂಲದ ಬಂಧಿತ ಆರೋಪಿ ನರಸಿಂಹ ರೆಡ್ಡಿ ವಿರುದ್ಧ ಸುಮಾರು 50ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದೆ. ಇದೀಗ ಗಿರಿನಗರ ಪೊಲೀಸರು CCTV ದೃಶ್ಯ ಪರಿಶೀಲಿಸಿ ಕಳ್ಳ ನರಸಿಂಹರೆಡ್ಡಿಯನ್ನು ಅರೆಸ್ಟ್ ಮಾಡಿದ್ದು, ಈತನಿಂದ 70 ಲಕ್ಷ ರೂ. ಮೌಲ್ಯದ ಒಂದು ಕೆಜಿ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ : ಬೆಂಗಳೂರಿನಲ್ಲಿ ನಾಪತ್ತೆಯಾಗಿದ್ದ ಟೆಕ್ಕಿ ವಿಪಿನ್ ನೋಯ್ಡಾದಲ್ಲಿ ಪತ್ತೆ..!