ಮೈಸೂರು : ಕಳ್ಳತನ ಮಾಡಲು ಬಂದು ಮಹಿಳೆ ಜೊತೆ ಅಸಭ್ಯ ವರ್ತನೆ ತೋರಿದ್ದ ಯುವಕನಿಗೆ ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ನಂಜನಗೂಡು ತಾಲೂಕಿನ ಬೊಕ್ಕಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಅದೇ ಗ್ರಾಮದ ಹರ್ಷ ಎಂಬಾತ ಕಳ್ಳತನಕ್ಕೆ ಯತ್ನಿಸಿದ ಯುವಕ.
ನಾಲ್ಕು ತಿಂಗಳ ಹಿಂದೆ ಪತಿಯನ್ನು ಕಳೆದುಕೊಂಡಿದ್ದ ಮಹಿಳೆ ಮೈಸೂರಿನ ಹಾಸ್ಟೆಲ್ ಒಂದರಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದರು. ತನಗಿದ್ದ ಒಂದು ಎಕರೆ ಜಮೀನನ್ನ ಭೋಗ್ಯಕ್ಕೆ ಹಾಕಿ ಮನೆಯಲ್ಲಿ 3 ಲಕ್ಷ ಹಣ ಇಟ್ಟುಕೊಂಡಿದ್ದರು.
ಈ ವಿಚಾರ ತಿಳಿದಿದ್ದ ಹರ್ಷ ಹೊಸ ವರ್ಷದ ಮೊದಲ ದಿನ ರಾತ್ರಿ ಮನೆಗೆ ನುಗ್ಗಿದ್ದ ಹರ್ಷ ಕಳ್ಳತನಕ್ಕೆ ಯತ್ನಿಸಿದ್ದ. ಕೂಡಲೇ ಎಚ್ಚೆತ್ತು ಮನೆಯೊಡತಿ ಕೂಗಿಕೊಂಡಿದ್ದಳು. ಈ ವಿಚಾರ ಗ್ರಾಮಸ್ಥರಿಗೆ ತಿಳಿಸಿದಾಗ ಹರ್ಷನನ್ನ ಪತ್ತೆ ಹಚ್ಚಿ ಕಂಬಕ್ಕೆ ಕಟ್ಟಿಹಾಕಿ ಧರ್ಮದೇಟು ನೀಡಿದ್ದಾರೆ. ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರು ಹರ್ಷನನ್ನ ಬಂಧಿಸಿದ್ದು, ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಇದನ್ನೂ ಓದಿ : ಆಳ ಪ್ರಪಾತಕ್ಕೆ ಜಾರಿದ ಅಯ್ಯಪ್ಪ ಮಾಲಾಧಾರಿಗಳಿದ್ದ ಬಸ್ – ಚಾಲಕ ದುರ್ಮರಣ..!