Download Our App

Follow us

Home » ಅಪರಾಧ » ಶಾಸಕ ಕೆ.ಗೋಪಾಲಯ್ಯಗೆ ಕೊಲೆ ಬೆದರಿಕೆ ಆರೋಪ : ಮಾಜಿ ಕಾರ್ಪೊರೇಟರ್ ಪದ್ಮರಾಜ್ ವಿರುದ್ಧ ಎಫ್ಐಆರ್..!

ಶಾಸಕ ಕೆ.ಗೋಪಾಲಯ್ಯಗೆ ಕೊಲೆ ಬೆದರಿಕೆ ಆರೋಪ : ಮಾಜಿ ಕಾರ್ಪೊರೇಟರ್ ಪದ್ಮರಾಜ್ ವಿರುದ್ಧ ಎಫ್ಐಆರ್..!

ಬೆಂಗಳೂರು : ಮಾಜಿ ಸಚಿವ ಕೆ. ಗೋಪಾಲಯ್ಯಗೆ ಕೊಲೆ ಬೆದರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಕಾರ್ಪೊರೇಟರ್ ಪದ್ಮರಾಜ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ನಿನ್ನೆ ತಡರಾತ್ರಿ 11 ಗಂಟೆ ಸುಮಾರಿಗೆ ಕರೆ ಮಾಡಿದ್ದ ಪದ್ಮರಾಜ್, ಗೋಪಾಲಯ್ಯಗೆ ಅವಾಚ್ಯವಾಗಿ ನಿಂದಿಸಿ, ಹತ್ಯೆಯ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಕಾಮಾಕ್ಷಿಪಾಳ್ಯ​ ಠಾಣೆಗೆ ಕೆ.ಗೋಪಾಲಯ್ಯ ದೂರು ನೀಡಿದ್ದಾರೆ.

ಪದ್ಮರಾಜ್​ ವಿರುದ್ಧ ಕೆ.ಗೋಪಾಲಯ್ಯ ಸ್ಪೀಕರ್​​ U.T ಖಾದರ್​ಗೆ  ದೂರು ನೀಡಿದ್ದರು. ಸದನದಲ್ಲೂ ಈ ಬಗ್ಗೆ ಮಾಜಿ ಸಚಿವ ಗೋಪಾಲಯ್ಯ ಪ್ರಸ್ತಾಪಿಸಿದ್ದರು. ನನಗೆ ಸೂಕ್ತ ಭದ್ರತೆ ನೀಡಿ ಎಂದು ಕೆ.ಗೋಪಾಲಯ್ಯ ಮನವಿ ಮಾಡಿದ್ದರು.

ಕಾಂಗ್ರೆಸ್ ಸರ್ಕಾರದಲ್ಲಿ ರಕ್ಷಣೆ ಇಲ್ಲ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿತ್ತು. ಸದ್ಯ ಗೋಪಾಲಯ್ಯ ನೀಡಿರುವ ದೂರಿನನ್ವಯ ಮಾಜಿ ಕಾರ್ಪೊರೇಟರ್ ಪದ್ಮರಾಜ್ ವಿರುದ್ಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಇದನ್ನೂ ಓದಿ : ರಾಜ್ಯಸಭೆ ಚುನಾವಣೆಗೆ 4 ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ : ರಾಜಸ್ಥಾನದಿಂದ ಸೋನಿಯಾ ಗಾಂಧಿ ಕಣಕ್ಕೆ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here