Download Our App

Follow us

Home » ಜಿಲ್ಲೆ » ಧರ್ಮಸ್ಥಳದಲ್ಲೂ ತಿರುಪತಿ ಮಾದರಿ ಕ್ಯೂ ಸಿಸ್ಟಂ..!

ಧರ್ಮಸ್ಥಳದಲ್ಲೂ ತಿರುಪತಿ ಮಾದರಿ ಕ್ಯೂ ಸಿಸ್ಟಂ..!

ಮಂಗಳೂರು : ದೇಶ-ವಿದೇಶಗಳಿಂದ ಭಕ್ತರು ಆಗಮಿಸುವ ಧರ್ಮಸ್ಥಳ ಮಂಜುನಾಥ ಸ್ವಾಮಿ ಕ್ಷೇತ್ರದಲ್ಲಿ ದೇವರ ದರ್ಶನಕ್ಕೆ ತೆರಳಲು ತಿರುಪತಿ ಮಾದರಿಯಲ್ಲಿ ಸರತಿ ಸಾಲಿನ ವ್ಯವಸ್ಥೆ ಮಾಡಲಾಗಿದೆ.

ಭಕ್ತರು ಸರದಿ ಸಾಲಿನಲ್ಲಿ ಕಾಯಲು 16 ಭವನ ರೆಡಿಯಾಗಿದ್ದು, ಪ್ರತಿ ಭವನದಲ್ಲಿ 800 ಭಕ್ತರು ತಂಗಲು ಅವಕಾಶ ಕಲ್ಪಿಸಲಾಗಿದೆ. ಜನವರಿ 7ರಂದು ‘ಶ್ರೀ ಸಾನಿಧ್ಯ’ ಸಂಕೀರ್ಣವನ್ನು ಉಪರಾಷ್ಟ್ರಪತಿ ಜಗದೀಪ್​​​​​ ಧನಕರ್​​​​​​​​​ ಉದ್ಘಾಟಿಸಲಿದ್ದಾರೆ.

ಸಕಲ ಸೌಲಭ್ಯಗಳನ್ನೊಳಗೊಂಡ ಸರತಿ ಸಾಲಿನ ಸಮುಚ್ಚಯ 2,75,177 ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡಿದ್ದು, 2 ಅಂತಸ್ತು ಹೊಂದಿದೆ. ಸಂಕೀರ್ಣದಲ್ಲಿ ಆಧುನಿಕ ತಂತ್ರಜ್ಞಾನದ ಬಳಕೆಯೊಂದಿಗೆ ಭಕ್ತರಿಗೆ ಎಲ್ಲ ಸೌಲಭ್ಯ ಅಳವಡಿಸಲಾಗಿದೆ. 16 ವಿಶಾಲ ಭವನಗಳಿದ್ದು, ಸರತಿಸಾಲಿನಲ್ಲಿ ಬಂದ ಭಕ್ತರು ವಿಶ್ರಾಂತಿ ಪಡೆಯಬಹುದು. ಪ್ರತಿ ಭವನದಲ್ಲಿ 800 ಮಂದಿ ತಂಗಲು ಅವಕಾಶವಿದೆ. ಇದರರ್ಥ, ಸರದಿಯಲ್ಲಿ ಜನರು ಸರದಿಯಲ್ಲಿ ನಿಂತು ಕಾಯಬೇಕಿಲ್ಲ. ವಿಶಾಲವಾದ ಭವನದಲ್ಲಿ ಕುರ್ಚಿಗಳ ಮೇಲೆ ಕುಳಿತು ಕ್ರಮೇಣವಾಗಿ ಮುಂದಿನ ಭವನಗಳಿಗೆ ಸ್ಥಳಾಂತರಗೊಳ್ಳಬಹುದು.

ಭವನಗಳಲ್ಲಿ ಮಕ್ಕಳ ಆರೈಕೆ ಕೊಠಡಿ, ಶೌಚಗೃಹ, ಕ್ಯಾಂಟೀನ್‌ ಸೌಲಭ್ಯವಿದೆ. ಅಲ್ಲಲ್ಲಿ ಸೂಚನಾ ಫಲಕ ಹಾಗೂ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಪ್ರವೇಶದ್ವಾರದ ಎದುರು ಧರ್ಮಸ್ಥಳದ ಇತಿಹಾಸ ಮತ್ತು ಪರಂಪರೆ ಬಿಂಬಿಸುವ ಆಕರ್ಷಕ ಕಲಾಕೃತಿಗಳನ್ನು ಅಳವಡಿಸಲಾಗಿದೆ. ರಾಜ್ಯದಲ್ಲಿ ಪ್ರಥಮ ಬಾರಿಗೆ ತಿರುಪತಿ ಮಾದರಿಯಲ್ಲಿ ಸರತಿ ಸಾಲಿನ ವ್ಯವಸ್ಥೆಯ ನೂತನ ಸಂಕೀರ್ಣವನ್ನು ಧರ್ಮಸ್ಥಳದಲ್ಲಿ ನಿರ್ಮಿಸಲಾಗಿದೆ.

ಇದನ್ನೂ ಓದಿ : ದಶಕದ ಬಳಿಕ ಟೀಂ ಇಂಡಿಯಾ ವಿರುದ್ಧ ಸರಣಿ ಗೆದ್ದ ಆಸ್ಟ್ರೇಲಿಯಾ..!

Leave a Comment

DG Ad

RELATED LATEST NEWS

Top Headlines

ಅನಾವರಣವಾಯ್ತು ‘ಅಪಾಯವಿದೆ ಎಚ್ಚರಿಕೆ’ ಚಿತ್ರದ ಟೀಸರ್.. ಪ್ರೇಕ್ಷಕರು ಫಿದಾ..!

ಇತ್ತೀಚೆಗೆ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದ ”ಅಪಾಯವಿದೆ ಎಚ್ಚರಿಕೆ” ಚಿತ್ರತಂಡ ಅದರ ವಿಶೇಷತೆಯಿಂದ ನಿರೀಕ್ಷೆ ಹುಟ್ಟಿಸಿತ್ತು. ನಂತರ “ಬ್ಯಾಚುಲರ್ ಬದುಕು” ಅನ್ನುವ ಸಾಂಗ್ ಬಿಡುಗಡೆಗೊಳಿಸಿ, ಎಲ್ಲಾ ಬ್ಯಾಚುಲರ್ಸ್

Live Cricket

Add Your Heading Text Here