ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಬಂಧಿಯಾಗಿರೋ ನಟ ದರ್ಶನ್ ಜೈಲು ಸೇರಿ ಈಗಾಗಲೇ 100 ದಿನಗಳು ಕಳೆದಿವೆ. ಸದ್ಯ ಪ್ರಕರಣದಲ್ಲಿ ಜಾಮೀನು ಕೋರಿ ದರ್ಶನ್ ಅರ್ಜಿ ಸಲ್ಲಿಸಿದ್ದು, ಜಾಮೀನು ಭವಿಷ್ಯ ಇಂದು ಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ.
ಹೌದು.. ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಹಾಗೂ ಎ2 ಆರೋಪಿಗಳಾದ ದರ್ಶನ್ ಹಾಗೂ ಪವಿತ್ರಾ ಗೌಡ ಅವರ ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ. ದರ್ಶನ್ ಹಾಗೂ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮಿನು ಅರ್ಜಿ ವಿಚಾರಣೆಯನ್ನು ಇಂದಿಗೆ ಮುಂದೂಡಲಾಗಿದ್ದು, ಇಂದೇ ಕೋರ್ಟ್ನಲ್ಲಿ ವಿಚಾರಣೆಗೆ ಬರುವ ಸಾಧ್ಯತೆ ಇದೆ.
ಕಳೆದ 4 ತಿಂಗಳಿನಿಂದ ಜೈಲಿನಲ್ಲಿರುವ ದರ್ಶನ್ ಹೊರ ಬರಲು ಕಾದು ಕೂತಿದ್ದಾರೆ. ಬಳ್ಳಾರಿ ಜೈಲಿನ ನರಕ ದಿನದಿಂದ ದಿನಕ್ಕೆ ಉಸಿರು ಗಟ್ಟಿಸುತ್ತಿದೆ. ಈಗಾಗಲೇ ಜಾಮೀನಿಗೆ ಅರ್ಜಿ ಸಲ್ಲಿಸಿರೋ ದರ್ಶನ್ ಯಾವಾಗಪ್ಪ ಹೊರಗೆ ಹೋಗ್ತೇನೆ ಎಂದು ಕಾಯ್ತಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ದರ್ಶನ್ ವಿರುದ್ಧ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸುತ್ತಿದ್ದಂತೆ, ದಾಸ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ರು. ಇಂದು ಸಿಟಿ ಸಿವಿಲ್ ಕೋರ್ಟ್ನಲ್ಲಿ ಬೇಲ್ ಅರ್ಜಿ ವಿಚಾರಣೆ ನಡೆಯಲಿದೆ. ಪವಿತ್ರಾ ಗೌಡ ಪರ ಈಗಾಗ್ಲೇ ಲಾಯರ್ ಸಬಾಷ್ಟಿಯನ್ ವಾದ ಮಂಡಿಸಿದ್ದಾರೆ. ಇಂದು ದರ್ಶನ್ ಮತ್ತು ಪವಿತ್ರಗೌಡ ಇಬ್ಬರ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.
ಮತ್ತೊಂದ್ಕಡೆ ಬೇಲ್ ಸಿಕ್ಕಿದ್ರೂ ಕೂಡ ತುಮಕೂರು ಜೈಲಿನಲ್ಲಿರುವ ಮೂವರು ಆರೋಪಿಗಳಿಗೆ ಇನ್ನೂ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಕಾರ್ತಿಕ್ ಅಲಿಯಾಸ್ ಕಪ್ಪೆ, ನಿಖಿಲ್ ನಾಯಕ್ ಹಾಗೂ ಕೇಶವಮೂರ್ತಿಗೆ ಕಳೆದ ಸೋಮವಾರ ಅಂದ್ರೆ, ಜಾಮೀನು ಸಿಕ್ಕಿ ಒಂದು ವಾರವಾಗಿದೆ. ಕೋರ್ಟ್ ಒಂದು ಲಕ್ಷ ಬಾಂಡ್, ಇಬ್ಬರು ವ್ಯಕ್ತಿಗಳ ಶ್ಯೂರಿಟಿ, ಸಾಕ್ಷ್ಯಗಳಿಗೆ ಬೆದರಿಕೆ ಹಾಕಬಾರದು. ಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ಷರತ್ತು ಬದ್ಧ ಜಾಮೀನು ನೀಡಿತ್ತು. ಅದ್ರೆ, ಆರೊಪಿಗಳಿಗೆ ಶ್ಯೂರಿಟಿ ಸಿಗದೆ ಪರದಾಡುತ್ತಿದ್ದಾರೆ.
ಇದನ್ನೂ ಓದಿ : ಬೀದರ್ : ಕರ್ತವ್ಯನಿರತ ಮಹಿಳಾ PSI ಮೇಲೆ ಹಲ್ಲೆ ಮಾಡಿದ್ದ ಕಾನ್‌ಸ್ಟೇಬಲ್ ಅಮಾನತು..!