ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿದ್ದ ನಟ ದರ್ಶನ್ ಮಧ್ಯಂತರ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಅನಾರೋಗ್ಯದ ಕಾರಣದಿಂದ ಜಾಮೀನು ಪಡೆದಿರುವ ದಾಸ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದ್ದು, ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ನಟ ದರ್ಶನ್, ಪವಿತ್ರಾಗೌಡ, ನಾಗರಾಜ್, ಅನುಕುಮಾರ್, ಲಕ್ಷ್ಮಣ್ ಮತ್ತು ಜಗದೀಶ್ ಸೇರಿ ಒಟ್ಟು ಆರು ಆರೋಪಿಗಳ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.
ಅನಾರೋಗ್ಯ ಕಾರಣಕ್ಕೆ ಮಧ್ಯಂತರ ಜಾಮೀನು ಪಡೆದಿರುವ ದರ್ಶನ್, ಈವರೆಗೂ ಸರ್ಜರಿ ಮಾಡಿಸಿಲ್ಲ. ಈ ಬಗ್ಗೆ ಎಸ್ಪಿಪಿ ಪ್ರಸನ್ನಕುಮಾರ್ ಆಕ್ಷೇಪಿಸಿದ್ದರು. ದರ್ಶನ್ ಅನಾರೋಗ್ಯ ಸಂಬಂಧ ಹೈಕೋರ್ಟ್ಗೆ ಮೆಡಿಕಲ್ ರಿಪೋರ್ಟ್ ಸಲ್ಲಿಸಿಸಲಾಗಿದೆ. ದಾಸನ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಅವರಿಂದ ವೈದ್ಯಕೀಯ ವರದಿ ಸಲ್ಲಿಕೆ ಮಾಡಲಾಗಿದ್ದು, ಮೆಡಿಕಲ್ ರಿಪೋರ್ಟ್ ಮೇಲೆ ಇಂದು ಎಸ್ಪಿಪಿ ಪ್ರಸನ್ನ ಕುಮಾರ್ ವಾದಿಸಲಿದ್ದಾರೆ.
ಕೊಲೆ ಪ್ರಕರಣದಲ್ಲಿ 131 ದಿನ ಜೈಲಿನಲ್ಲಿದ್ದ ನಟ ದರ್ಶನ್ ಅವರಿಗೆ ವೈದ್ಯಕೀಯ ಕಾರಣಗಳಿಗಾಗಿ ಹೈಕೋರ್ಟ್ 6 ವಾರಗಳ ಕಾಲ ಷರತ್ತುಬದ್ಧ ಜಾಮೀನು ನೀಡಿದೆ. ಜಾಮೀನಿನ ಅವಧಿ ಕೂಡ ಅರ್ಧದಷ್ಟು ಮುಗಿಯುತ್ತಾ ಬಂದಿದೆ. ದರ್ಶನ್ ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಸದ್ಯ ಬೆಂಗಳೂರಿನ ಬಿಜಿಎಸ್ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದ್ರೆ ನಟ ದರ್ಶನ್ ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿಯನ್ನು ಸಲ್ಲಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.
‘ಕೊಲೆಯಾದ ಸ್ಥಳದಲ್ಲೇ ದರ್ಶನ್ ಇರುವ ಫೋಟೋಗಳು ಕೂಡ ಸಿಕ್ಕಿದೆ. ಯಾರೋ ಜೊತೆಯಲ್ಲಿದ್ದವ ವಿಡಿಯೋ ಮಾಡಿಕೊಂಡಿದ್ದ. ಅದನ್ನ ಪ್ರೊಡ್ಯೂಸ್ ಮಾಡಿದ್ದೇವೆ. ಪ್ರಮುಖ ಸಾಕ್ಷಿಗಳು ಸಿಕ್ಕಿರುವ ಹಿನ್ನೆಲೆ ನಟ ದರ್ಶನ್ ಬೇಲ್ ಕ್ಯಾನ್ಸಲ್ ಮಾಡಬೇಕು. ಮುಂದಿನ ಕ್ರಮದ ಬಗ್ಗೆ ಕೂಡ ತನಿಖೆ ಆಗುತ್ತಿದೆ’ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಇತ್ತೀಚೆಗೆ ಹೇಳಿದ್ದರು.
ಇದನ್ನೂ ಓದಿ : ಬಿಟಿವಿ ವರದಿ ಬೆನ್ನಲ್ಲೇ ಎಚ್ಚೆತ್ತ ದೇವನಹಳ್ಳಿ ತಹಶೀಲ್ದಾರ್ – ರಾತ್ರೋರಾತ್ರಿ ಜಮೀನು ಒತ್ತುವರಿ ಮಾಡಿದ್ದವರ ವಿರುದ್ಧ ಕ್ರಮ..!