Download Our App

Follow us

Home » ರಾಜ್ಯ » ಹಾಸನಾಂಬೆ ದರ್ಶನಕ್ಕೆ ಇಂದು ಕೊನೆಯ ದಿನ.. ನಾಳೆ ದೇಗುಲದ ಬಾಗಿಲು ಕ್ಲೋಸ್..!

ಹಾಸನಾಂಬೆ ದರ್ಶನಕ್ಕೆ ಇಂದು ಕೊನೆಯ ದಿನ.. ನಾಳೆ ದೇಗುಲದ ಬಾಗಿಲು ಕ್ಲೋಸ್..!

ಹಾಸನ : ವರ್ಷಕ್ಕೆ ಒಂದು ಬಾರಿ ಮಾತ್ರ ಬಾಗಿಲು ತೆರೆಯುವ ಶಕ್ತಿ ದೇವತೆ ಹಾಸನಾಂಬೆ ದರ್ಶನಕ್ಕೆ ಇಂದು ಕೊನೆ ದಿನವಾಗಿದೆ. ಈ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ಇರುವ ಧರ್ಮ ದರ್ಶನದ ಸಾಲುಗಳು ಸಂಪೂರ್ಣ ಭರ್ತಿಯಾಗಿವೆ.

ಹಾಸನಾಂಬೆ ದರ್ಶನಕ್ಕೆ ಇಂದು ಕೊನೆ ದಿನವಾಗಿದ್ದು, ಸಂಪ್ರದಾಯದಂತೆ ನವೆಂಬರ್​ 03 ರಂದು ದೇವಾಲಯದ ಬಾಗಿಲು ಮುಚ್ಚಲಾಗುತ್ತದೆ. ಅಕ್ಟೋಬರ್ 24 ರಂದು ಮಧ್ಯಾಹ್ನ 12:15 ಗಂಟೆಗೆ ದೇವಾಲಯದ ಬಾಗಿಲನ್ನು ಶಾಸ್ತ್ರೋಕ್ತವಾಗಿ ತೆರೆಯಲಾಗಿತ್ತು.

ಅಂದಿನಿಂದ ಇವತ್ತಿನವರೆಗೆ ಭಕ್ತರು ಲಕ್ಷಾಂತರ ಸಂಖ್ಯೆಯಲ್ಲಿ ಬಂದು ಅಧಿದೇವತೆ ಹಾಸನಾಂಬೆಯ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ದೀಪಾವಳಿ ದಿನವೂ ದೇವಿಯ ದರ್ಶನಕ್ಕೆ ಭಕ್ತ ಗಣ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದೆ. ಹೀಗಾಗಿ ದೇವಾಲಯದ ಧರ್ಮದರ್ಶನದ ಸಾಲುಗಳು ಸಂಪೂರ್ಣ ಭರ್ತಿಯಾಗಿವೆ.

ನಿನ್ನೆ ಹಾಸನಾಂಬೆಯ ನೈವೇದ್ಯಕ್ಕಾಗಿ ರಾತ್ರಿ 12 ಗಂಟೆಗೆ ಅರ್ಚಕರು ಬಾಗಿಲು ಮುಚ್ಚಿದ್ದರು. ಮತ್ತೆ ಇಂದು ಬೆಳಗಿನ ಜಾವ 4 ಗಂಟೆಗೆ ಬಾಗಿಲು ತೆರೆದಿದ್ದು, ದರ್ಶನ ಆರಂಭಿಸಲಾಗಿದೆ. ದರ್ಶನದ ಸಂಬಂಧ ಹಲವು ಸಮಸ್ಯೆಗಳು ಕೇಳಿಬಂದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಸಿಬ್ಬಂದಿ ನಿನ್ನೆಯಿಂದ ವಿವಿಐಪಿ ಹಾಗೂ ವಿಐಪಿ ಪಾಸ್​ಗಳನ್ನು ರದ್ದು ಮಾಡಿ ಎಲ್ಲರಿಗೂ ಸಾಮಾನ್ಯ ದರ್ಶನದಲ್ಲಿ ಕಳುಹಿಸಲಾಗುತ್ತಿದೆ. ನಾಳೆ ಬೆಳಗಿನ ಜಾವ 4 ಗಂಟೆವರೆಗೆ ನಿರಂತವಾಗಿ ದೇವಿ ದರ್ಶನಕ್ಕೆ ಭಕ್ತರಿಗೆ ಸಿಗಲಿದೆ. ಬಳಿಕ ಮಧ್ಯಾಹ್ನ 12 ಗಂಟೆ ನಂತರ ಹಾಸನಾಂಬೆಯ ಗರ್ಭಗುಡಿಯ ಬಾಗಿಲು ಮುಚ್ಚಲಾಗುತ್ತದೆ.

ಇದನ್ನೂ ಓದಿ : ಆಸ್ಪತ್ರೆ ಸೇರಿರೋ ದರ್ಶನ್​​ ಭೇಟಿಗೆ 7 ಜನರಿಗೆ ಮಾತ್ರ ಅವಕಾಶ – ಕಾರಣವೇನು?

Leave a Comment

DG Ad

RELATED LATEST NEWS

Top Headlines

ಶೃಂಗೇರಿ ಮಠದ ಜ್ಞಾನೋದಯ ಕಾಲೇಜು​ ಡೆಮಾಲಿಷನ್​​ಗೆ ತಡೆ – ಯಥಾಸ್ಥಿತಿಗೆ BBMP ಆದೇಶ..!

ಬೆಂಗಳೂರು : ರಾಜ್ಯ ಸರ್ಕಾರ ಶೃಂಗೇರಿಯ ಶಾರದ ಮಠದ ಅಧೀನದಲ್ಲಿ ನಡೆಯುತ್ತಿರೋ ಜ್ಞಾನೋದಯ ಕಾಲೇಜಿನ ಕಟ್ಟಡಕ್ಕೆ ಡೆಮಾಲಿಷನ್ ಆದೇಶ ನೀಡಿತ್ತು. ಈ ವಿಚಾರ ಹೊರ ಬರುತ್ತಿದ್ದಂತೆ ಸರ್ಕಾರದ

Live Cricket

Add Your Heading Text Here