Download Our App

Follow us

Home » ರಾಷ್ಟ್ರೀಯ » ನಾಳೆಯೇ ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆ..!

ನಾಳೆಯೇ ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆ..!

ನವದೆಹಲಿ : ಬಹು ನಿರೀಕ್ಷಿತ ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಗೆ ಮುಹೂರ್ತ ನಿಗದಿಯಾಗಿದೆ. ಲೋಕಸಭೆ ಚುನಾವಣಾ ದಿನಾಂಕವನ್ನು ಮಾ.16ರಂದು ಘೋಷಣೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ.

ದೆಹಲಿಯ ವಿಜ್ಞಾನ್ ಭವನದಲ್ಲಿ ನಾಳೆ ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಟಿ ನಡೆಸಲಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರ ನೇತೃತ್ವದ ಚುನಾವಣಾ ಆಯೋಗ ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆ ಮಾಡಲಿದೆ ಎನ್ನಲಾಗಿದೆ.

ಇಂದು ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾಗಿ ಸುಖಬೀರ್ ಸಿಂಗ್ ಸಂಧು ಮತ್ತು ಜ್ಞಾನೇಶ್ ಕುಮಾರ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಮುಖ್ಯಚುನಾವಣಾ ಆಯುಕ್ತ ರಾಜೀವ್ ಕುಮಾರ್ ಜೊತೆ ಮಹತ್ವದ ಸಭೆ ನಡೆಸಿದ್ದು, ನಾಳೆ ಮಧ್ಯಾಹ್ನ 3 ಗಂಟೆಗೆ ಚುನಾವಣೆ ದಿನಾಂಕ ಘೋಷಣೆ ಮಾಡುವ ಸುದ್ದಿಗೋಷ್ಟಿ ನಿಗದಿ ಮಾಡಲಾಗಿದೆ. ಚುನಾವಣೆ ದಿನಾಂಕ ಘೋಷಣೆಯ ಜೊತೆಗೆ ನಾಳೆ ಮಧ್ಯಾಹ್ನದಿಂದಲೇ ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ.

ಇದನ್ನೂ ಓದಿ : ಕರ್ನಾಟಕದ ರಸ್ತೆ ಯೋಜನೆಗಳಿಗೆ 1385 ಕೋಟಿ ರೂ. ಅನುದಾನ ಮಂಜೂರು : ಸಚಿವ ನಿತಿನ್ ಗಡ್ಕರಿ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here