Download Our App

Follow us

Home » ರಾಜಕೀಯ » ಸಿಎಂ ಸಿದ್ದರಾಮಯ್ಯಗೆ ನಾಳೆ ಬಿಗ್​ ಡೇ – ಹೈಕೋರ್ಟ್​ನಲ್ಲಿ ಪ್ರಾಸಿಕ್ಯೂಷನ್​​ ಭವಿಷ್ಯ ನಿರ್ಧಾರ..!

ಸಿಎಂ ಸಿದ್ದರಾಮಯ್ಯಗೆ ನಾಳೆ ಬಿಗ್​ ಡೇ – ಹೈಕೋರ್ಟ್​ನಲ್ಲಿ ಪ್ರಾಸಿಕ್ಯೂಷನ್​​ ಭವಿಷ್ಯ ನಿರ್ಧಾರ..!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಭವಿಷ್ಯ ನಾಳೆ ನಿರ್ಧಾರವಾಗಲಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕೇಸ್​​ನಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿಯ ತೀರ್ಪನ್ನು ಹೈಕೋರ್ಟ್‌ ನಾಳೆ ಪ್ರಕಟಿಸಲಿದೆ.

ಹೈಕೋರ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಮುಡಾ ಕೇಸ್‌ನ ಅರ್ಜಿಯ ವಿಚಾರಣೆ ನಡೆದಿತ್ತು. ಸಿದ್ದರಾಮಯ್ಯ ಪರವಾಗಿ ಹಿರಿಯ ಸುಪ್ರೀಂ ಕೋರ್ಟ್‌ ವಕೀಲ ಅಭಿಷೇಕ್‌ ಮನು ಸಿಂಘ್ವಿ ಸೇರಿದಂತೆ ಹಲವು ಹಿರಿಯ ವಕೀಲರು ವಾದ ಮಂಡಿಸಿದ್ದರು. ಇನ್ನು ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ ಮೆಹ್ತಾ ವಾದ ಮಂಡಿಸಿದ್ದರು. ಅಲ್ಲದೇ ದೂರುದಾರರಾದ ಟಿಜೆ ಅಬ್ರಾಹಂ ಮತ್ತು ಸ್ನೇಹಮಯಿ ಕೃಷ್ಣ ಪರ ವಕೀಲರು ಸಹ ತಮ್ಮ ವಾದ ಮಂಡಿಸಿದ್ದರು. ಈ ಎಲ್ಲಾ ವಾದ ಪ್ರತಿವಾದ ಆಲಿಸಿದ್ದ ನ್ಯಾ. ಎಂ.ನಾಗಪ್ರಸನ್ನ ಅವರು ಆದೇಶವನ್ನು ಕಾಯ್ದಿರಿಸಿದ್ದರು.

ಈಗಾಗಲೇ ಎರಡು ಕಡೆಯ ವಾದವನ್ನು ಆಲಿಸಿ ವಿಚಾರಣೆ ಮುಕ್ತಾಯಗೊಳಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ನಾಳೆ ಮಧ್ಯಾಹ್ನ 12 ಗಂಟೆಗೆ ತೀರ್ಪು ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ಭವಿಷ್ಯ ಏನಾಗಲಿದೆ ಎನ್ನುವ ಕುತೂಹಲ ಮೂಡಿಸಿದ್ದು, ಎಲ್ಲರ ಚಿತ್ತ ಹೈಕೋರ್ಟ್​​ನತ್ತ ನೆಟ್ಟಿದೆ.

ಇದನ್ನೂ ಓದಿ : ಬಿಗ್​ ಬಾಸ್​ ನಿರೂಪಣೆಗೆ ಸುದೀಪ್ ಪಡೆಯೋ ಸಂಭಾವನೆ ಎಷ್ಟು ಗೊತ್ತಾ? – ಕೊನೆಗೂ ಉತ್ತರ ಕೊಟ್ಟ ಕಿಚ್ಚ..!

Leave a Comment

DG Ad

RELATED LATEST NEWS

Top Headlines

4 ಅಂತಸ್ತಿನ ಕಟ್ಟಡ ಕುಸಿತ – ಕೂದಲೆಳೆ ಅಂತರದಲ್ಲಿ ಪಾರಾದ ತಾಯಿ, ಮಗು..!

ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ತಾಯಿ ಮಗು ಪ್ರಾಣಾಪಾಯದಿಂದ ಪಾರಾಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಆಘಾತಕಾರಿ ಘಟನೆಯ ಸಂಪೂರ್ಣ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೀಡಿಯೊದಲ್ಲಿ

Live Cricket

Add Your Heading Text Here