ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A2 ಆರೋಪಿಯಾಗಿರುವ ನಟ ದರ್ಶನ್ಗೆ ನಾಳೆ ನಿರ್ಣಾಯಕ ದಿನವಾಗಿದೆ. ಮಧ್ಯಂತರ ಜಾಮೀನು ಪಡೆದು ಜೈಲಿಂದ ಹೊರಗೆ ಬಂದಿರುವ ನಟ ದರ್ಶನ್ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಾಮೀನು ಸಿಗುವ ದಿನಕ್ಕಾಗಿ ದರ್ಶನ್ ಕಾಯ್ತಿದ್ದಾರೆ. ನಾಳೆ ಮಧ್ಯಾಹ್ನ 2.30ಕ್ಕೆ ಹೈಕೋರ್ಟ್ನಲ್ಲಿ ಜಾಮೀನು ತೀರ್ಪು ಹೊರಬೀಳಲಿದೆ.
ಇನ್ನು ವೈದರ ಸಲಹೆಯಂತೆ ದರ್ಶನ್ಗೆ ನಾಳೆ ಶಸ್ತ್ರ ಚಿಕಿತ್ಸೆ ನಡೆಯುವ ಸಾಧ್ಯತೆಯಿದೆ. ದರ್ಶನ್ ಸರ್ಜರಿಗೆ ಪತ್ನಿ ವಿಜಯಲಕ್ಷ್ಮೀ ಗ್ರಿನ್ ಸಿಗ್ನಲ್ ಕೊಟ್ಟಿದ್ದು, ಡಾ. ನವೀನ್ ಅಪ್ಪಾಜಿ ಗೌಡ ನಾಳೆ 10 ಗಂಟೆಯ ನಂತರ ವೈದ್ಯರ ಜೊತೆ ಚರ್ಚಿಸಿ ಸರ್ಜರಿಗೆ ಪ್ಲಾನ್ ಮಾಡಲಿದ್ದಾರೆ.
ಕಳೆದೆರಡು ವಾರಗಳಿಂದ ಹೈಕೋರ್ಟ್ ನ್ಯಾ.ವಿಶ್ವಜಿತ್ ಶೆಟ್ಟಿ ಪೀಠದಲ್ಲಿ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆದಿತ್ತು. ಆರೋಪಿಗಳ ಪರ ವಕೀಲರು ವಾದ-ಪ್ರತಿವಾದ ಮಂಡಿಸಿದ್ರು. ವಾದ ಪ್ರತಿವಾದ ಆಲಿಸಿದ್ದ ನ್ಯಾಯಾಧೀಶರು ತೀರ್ಪು ಕಾಯ್ದಿರಿಸಿದ್ರು. ನಾಳೆ ಮಧ್ಯಾಹ್ನ 2:30ಕ್ಕೆ ಜಾಮೀನು ತೀರ್ಪು ಹೊರಬರಲಿದೆ.
ಇದನ್ನೂ ಓದಿ : ವಿಶ್ವ ಚೆಸ್ ಚಾಂಪಿಯನ್ ಶಿಪ್ ಗೆದ್ದು ಇತಿಹಾಸ ನಿರ್ಮಿಸಿದ ಭಾರತದ ಗ್ರ್ಯಾಂಡ್ ಮಾಸ್ಟರ್ ಡಿ. ಗುಕೇಶ್..!