ಗುರುಮೂರ್ತಿ ನಿರ್ದೇಶನದ, ಪ್ರಿಯಾಂಕ ಉಪೇಂದ್ರ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಉಗ್ರಾವತಾರ’ ಸಿನಿಮಾ ನಾಳೆ ರಾಜ್ಯಾದ್ಯಂತ ಅಧ್ಧೂರಿಯಾಗಿ ರಿಲೀಸ್ ಆಗಲಿದೆ. ಎಸ್.ಜಿ.ಎಸ್ ಕ್ರಿಯೇಶನ್ಸ್ ಬ್ಯಾನರ್ನಲ್ಲಿ ಎಸ್.ಜಿ.ಸತೀಶ್ ನಿರ್ಮಾಣ ಮಾಡಿರುವ ‘ಉಗ್ರಾವತಾರ’ ಸಿನಿಮಾ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದ್ದು, ಚಿತ್ರದಲ್ಲಿ ನಟಿ ಪ್ರಿಯಾಂಕಾ ಉಪೇಂದ್ರ ಖಡಕ್ ಪೊಲೀಸ್ ಆಫೀಸರ್ ಆಗಿ ನಟಿಸಿದ್ದಾರೆ.
‘ಉಗ್ರಾವತಾರ’ ಸಿನಿಮಾ ಕನ್ನಡ, ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಒಟ್ಟು ಭಾಷೆಯಲ್ಲಿ ಬಿಡುಗಡೆಗೆಯಾಗಲಿದೆ. ಪ್ರಸಕ್ತ ಸಾಮಾಜಿಕ ವಿಷಯಗಳು, ಮಹಿಳೆಯರ ಮೇಲಿನ ಶೋಷಣೆ, ಅಪರಾಧ ಇದರ ಜೊತೆಗೆ ಒಂದಷ್ಟು ಗಂಭೀರ ವಿಷಯಗಳ ಕಥಾಹಂದರ ಈ ಚಿತ್ರದಲ್ಲಿದೆ.
ಹೆಣ್ಣಿಗೆ ಹೇಗೆ ಗೌರವ ಕೊಡಬೇಕು. ಅಮ್ಮ, ಅಕ್ಕ, ತಂಗಿಯನ್ನು ನೋಡುವಂತೆಯೇ ಹೊರಗಡೆಯ ಹೆಣ್ಣು ಮಕ್ಕಳನ್ನು ಕಾಣಬೇಕು ಎಂಬ ಅಂಶವನ್ನು ಹೇಳಲಾಗುತ್ತಿದೆ. ಸಮಾಜದಲ್ಲಿ ನಡೆದಂತ ಒಂದಿಷ್ಟು ನೈಜ ಅಂಶಗಳನ್ನು ಇಟ್ಟುಕೊಂಡು ನಿರ್ದೇಶಕರು ಚಿತ್ರರೂಪ ಕೊಟ್ಟಿದ್ದಾರೆ.
ಚಿತ್ರದಲ್ಲಿ ಬಹುಭಾಷಾ ನಟ ಸುಮನ್, ನಟರಾಜ್ ಪೇರಿ, ಅಜಯ್, ಪವಿತ್ರ ಲೋಕೇಶ್, ಸಾಯಿ ಧಿನಾ, ಕಾಕ್ರೋಚ್ ಸುಧಿ, ಲಕ್ಷ್ಮಿ ಶೆಟ್ಟಿ ಹಾಗೂ ಇನ್ನಿತರರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಕೃಷ್ಣ ಬಸ್ರೂರು ಸಂಗೀತ, ನಂದಕುಮಾರ್ ಛಾಯಾಗ್ರಹಣವಿದೆ. ಕಿನ್ನಾಳ್ರಾಜ್ ಸಾಹಿತ್ಯ ಮತ್ತು ಸಂಭಾಷಣೆ, ವಿನೋಧ್-ಮಾಸ್ ಮಾದ- ಅಶೋಕ್ ಸಾಹಸ, ವೆಂಕಿ.ಯುಡಿವಿ ಸಂಕಲನ ಚಿತ್ರಕ್ಕಿದೆ.
ಇದನ್ನೂ ಓದಿ : ತೆರೆಮೇಲೆ ಅಬ್ಬರಿಸಿದ “ಬಘೀರ” – ಸೂಪರ್ ಹೀರೋ ಆದ ರೋರಿಂಗ್ ಸ್ಟಾರ್ ಶ್ರೀಮುರಳಿ..!