ಬೆಂಗಳೂರು : ಇಂದಿನಿಂದ ನ.17ರ ವರೆಗೂ ರಾಜ್ಯದ ಬಹುತೇಕ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಹಲವು ಜಿಲ್ಲೆಗಳಲ್ಲಿ ಮಿಂಚು, ಗುಡುಗು, ಬಿರುಗಾಳಿ ಸಹಿತ ಸಾಧಾರಣ ಮಳೆಯಾಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಚಿಕ್ಕಬಳ್ಳಾಪುರದಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಸಿಲಿಕಾನ್ ಸಿಟಿಯಲ್ಲಿ ಸಂಜೆ ಸಮಯದಲ್ಲಿ ಮೋಡಕವಿದ ವಾತವರಣವಿರಲಿದೆ. ಇನ್ನು ಬೆಂಗಳೂರಿನ ಹಲವೆಡೆ ಇಂದು ಸಂಜೆ ಹೊತ್ತಿಗೆ ಮಳೆ ಅಬ್ಬರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಇನ್ನು ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ದಾವಣಗೆರೆ, ತುಮಕೂರಿನಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿಯಲ್ಲಿ ಗುಡುಗ ಸಹಿತ ಭಾರೀ ಮಳೆ ಬೀಳುವ ಸಾಧ್ಯತೆಯಿದೆ. ಸುಮಾರು 30-40ಕಿಮಿ. ವೇಗದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರಕನ್ನಡ ಜಿಲ್ಲೆಯ ಹಲವು ಸ್ಥಳಗಲ್ಲಿ ಮಳೆ ಮುನ್ಸುಚನೆ ನೀಡಲಾಗಿದೆ.