Download Our App

Follow us

Home » ರಾಜ್ಯ » ರಾಜ್ಯ ಸರ್ಕಾರದ ವಿರುದ್ದ ಸಾರಿಗೆ ನೌಕರರ ಸಮರ : ವಿವಿಧ ಬೇಡಿಕೆ ಆಗ್ರಹಿಸಿ ಮಾರ್ಚ್ 4ರಿಂದ ಸತ್ಯಾಗ್ರಹಕ್ಕೆ ಕರೆ..!

ರಾಜ್ಯ ಸರ್ಕಾರದ ವಿರುದ್ದ ಸಾರಿಗೆ ನೌಕರರ ಸಮರ : ವಿವಿಧ ಬೇಡಿಕೆ ಆಗ್ರಹಿಸಿ ಮಾರ್ಚ್ 4ರಿಂದ ಸತ್ಯಾಗ್ರಹಕ್ಕೆ ಕರೆ..!

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನೌಕರರು ಮತ್ತೆ ರಾಜ್ಯ ಸರ್ಕಾರದ ವಿರುದ್ದ ಹೋರಾಟಕ್ಕೆ ಧುಮುಕಿದ್ದಾರೆ.

ಸರ್ಕಾರದ ವಿರುದ್ಧ ಮತ್ತೆ ಸಾರಿಗೆ ನೌಕರರು ಸಮರ ಸಾರಲು ಮುಂದಾಗಿದ್ದು, ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ  ಮಾರ್ಚ್ 4 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಹೋರಾತ್ರಿ ಅನಿರ್ದಿಷ್ಟವಾಧಿ ಸತ್ಯಾಗ್ರಹಕ್ಕೆ ಕರೆ ಕೊಟ್ಟಿದ್ದಾರೆ.

ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದಿಂದ ಕುಟುಂಬ ಸಮೇತ ಸತ್ಯಾಗ್ರಹ ನಡೆಸಲು ಸಾರಿಗೆ ನೌಕರರು ನಿರ್ಧರಿಸಿದ್ದು, ಡಿ.2020 ಹಾಗೂ ಏಪ್ರಿಲ್ 2021 ರಲ್ಲಿ ನಡೆದ ಮುಷ್ಕರದ ಸಮಯದಲ್ಲಿ ವಜಾಗೊಂಡಿರುವ ನೌಕರರನ್ನು ಯಾವುದೇ ಷರತ್ತುಗಳಿಲ್ಲದೆ ಕೂಡಲೇ ಕರ್ತವ್ಯಕ್ಕೆ ಮರು ನೇಮಕಾತಿ ಮಾಡಿಕೊಳ್ಳಬೇಕು ಎಂದು ಸಾರಿಗೆ ನೌಕರರು ಆಗ್ರಹ ಮಾಡಿದ್ದಾರೆ.

ಹಾಗೂ ಸರ್ಕಾರ ಕೂಡಲೇ ಸಾರಿಗೆ ನೌಕರರ ಬೇಡಿಕೆ ಈಡೇರಿಸಬೇಕು. ಇಲ್ಲವಾದ್ರೆ ಮಾರ್ಚ್ 4 ರಿಂದ ಅಹೋರಾತ್ರಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆಯನ್ನು ಸರ್ಕಾರಕ್ಕೆ ರಾಜ್ಯ ರಸ್ತೆ ಸಾರಿಗೆ ನೌಕರರು ನೀಡಿದ್ದಾರೆ.

ಸಾರಿಗೆ ನೌಕರರ ಬೇಡಿಕೆಗಳೇನು?

  • 2020 ರಿಂದ ನಾಲ್ಕು ಸಾರಿಗೆ ನಿಗಮದ ಸಿಬ್ಬಂದಿ ಗೆ ಒಂದೇ ಕಂತಿನಲ್ಲಿ ವೇತನ ಹಿಂಬಾಕಿಗೆ ಒತ್ತಾಯ
  • ಸರ್ಕಾರಿ ನೌಕರರಿಗೆ ಸರಿ ಸಮಾನ ವೇತನ ಮತ್ತು ಸವಲತ್ತುಗಳನ್ನ ಸಾರಿಗೆ ನೌಕರರಿಗೆ ವಿಸ್ತರಣೆಗೆ ಒತ್ತಾಯ
  • ಡಿ.2020 ಹಾಗೂ ಏಪ್ರಿಲ್ 2021 ರಲ್ಲಿ ನಡೆದ ಮುಷ್ಕರದ ಸಮಯದಲ್ಲಿ ವಜಾಗೊಂಡಿರುವ ನೌಕರರನ್ನು ಯಾವುದೇ ಷರತ್ತುಗಳಿಲ್ಲದೆ ಮರು ನೇಮಕಾತಿ ಮಾಡಿಕೊಳ್ಳುವುದು.

ದನ್ನೂ ಓದಿ : ಮಂಗಳೂರಿನಲ್ಲಿ ಟಿಪ್ಪು ಸುಲ್ತಾನ್ ಕಟ್ ಔಟ್ ತೆರವಿಗೆ ಪೊಲೀಸರಿಂದ ನೋಟಿಸ್..!

Leave a Comment

DG Ad

RELATED LATEST NEWS

Top Headlines

ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್​ – ಭೋಪಾಲ್​ನಲ್ಲಿ ಆರೋಪಿ ಅಭಿಷೇಕ್​ ಅರೆಸ್ಟ್​..!

ಬೆಂಗಳೂರು : ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಅಭಿಷೇಕ್​ನನ್ನು ಇದೀಗ ಬೆಂಗಳೂರು ಪೊಲೀಸರು ಭೂಪಾಲ್​ನಲ್ಲಿ ಬಂಧಿಸಿದ್ದಾರೆ. ಜು.23 ರಂದು ಕೋರಮಂಗಲದ

Live Cricket

Add Your Heading Text Here