ಮೆಲ್ಬೋರ್ನ್ : ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಅವರ ಗೌರವಾರ್ಥವಾಗಿ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಎರಡನೇ ದಿನವಾದ ಇಂದು ಟೀಂ ಇಂಡಿಯಾ ಆಟಗಾರರು ತೋಳಿಗೆ ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದ್ದಾರೆ. ಮನಮೋಹನ್ ಸಿಂಗ್ ಅವರ ಸ್ಮರಣಾರ್ಥ ಗೌರವಾರ್ಥವಾಗಿ ಭಾರತ ತಂಡ ಕೈಗೆ ಕಪ್ಪು ಪಟ್ಟಿಗಳನ್ನು ಧರಿಸಿದೆ ಎಂದು ಬಿಸಿಸಿಐ ತಿಳಿಸಿದೆ.
ಸಂತಾಪ ಸೂಚಿಸಿದ ಮಾಜಿ ಕ್ರಿಕೆಟಿಗರು : ಇನ್ನು ಅಗಲಿದ ಚೇತನಕ್ಕೆ ಟೀಂ ಇಂಡಿಯಾದ ಹಲವು ಮಾಜಿ ಆಟಗಾರರು ಸಂತಾಪ ಸೂಚಿಸಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ಗಳನ್ನು ಹಂಚಿಕೊಂಡಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಸಂತಾಪ ಸೂಚಿಸಿರುವ ವಿರೇಂದ್ರ ಸೆಹ್ವಾಗ್, ‘ನಮ್ಮ ಮಾಜಿ ಪ್ರಧಾನಿ ಶ್ರೀ ಮನಮೋಹನ್ ಸಿಂಗ್ ಅವರ ನಿಧನಕ್ಕೆ ನನ್ನ ಹೃತ್ಪೂರ್ವಕ ಸಂತಾಪಗಳು. ಓಂ ಶಾಂತಿ’ ಎಂದು ಬರೆದುಕೊಂಡಿದ್ದಾರೆ.
ಭಾರತದ ಮಾಜಿ ಆಲ್ ರೌಂಡರ್ ಯುವರಾಜ್ ಸಿಂಗ್ ಕೂಡ ಸಂತಾಪ ಸೂಚಿಸಿದ್ದು, ‘ಡಾ. ಮನಮೋಹನ್ ಸಿಂಗ್ ಅವರ ನಿಧನದ ದುಃಖದ ಸುದ್ದಿ. ಭಾರತದ ಪ್ರಗತಿಗಾಗಿ ಅವಿರತವಾಗಿ ಶ್ರಮಿಸಿದ ದೂರದೃಷ್ಟಿಯ ನಾಯಕ ಮತ್ತು ನಿಜವಾದ ರಾಜಕಾರಣಿ. ಅವರ ಬುದ್ಧಿವಂತಿಕೆ ಮತ್ತು ನಮ್ರತೆ ಯಾವಾಗಲೂ ನೆನಪಿನಲ್ಲಿ ಉಳಿಯುತ್ತದೆ. ಅವರ ಪ್ರೀತಿಪಾತ್ರರಿಗೆ ನನ್ನ ಹೃತ್ಪೂರ್ವಕ ಸಂತಾಪಗಳು ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಹೆಚ್.ಡಿ ದೇವೇಗೌಡ, ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರಿಂದ ಸಂತಾಪ..!